ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಸಾಧ್ಯತೆ

ಬೆಂಗಳೂರು : ಮುಂದಿನ ಒಂದು ವಾರ ರಾಜ್ಯದಲ್ಲಿ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವುದರಿಂದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸೋಮವಾರ, ಮಂಗಳವಾರ ಕೆಲವು ಕಡೆ ಮಳೆಯಾಗಿದೆ. ಬುಧವಾರದಿಂದ ದಕ್ಷಿಣ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಿಗೆ ಮಳೆ ವ್ಯಾಪಿಸಲಿದೆ

ಮೇ 13 ಮತ್ತು 14 ರಂದು ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಲಿದೆ.

ಉತ್ತರ ಕರ್ನಾಟಕದ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಬುಧವಾರದಿಂದ ಮಳೆ ಆರಂಭವಾಗಲಿದೆ. ನಂತರ ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ವ್ಯಾಪಿಸಲಿದೆ‌ ಎಂದು ಹೇಳಲಾಗಿದೆ.

Latest Indian news

Popular Stories