ಬೆಂಗಳೂರು: ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ 137.75 ಕೋಟಿ ವೆಚ್ವದಲ್ಲಿ 50 ಬೆಡ್ಗಳ ಕ್ರಿಟಿಕಲ್ ಕೇರ್ ಘಟಕಗಳ ನಿರ್ಮಾಣಕ್ಕೆ ಸರ್ಕಾರ ಅನುಮೋದನೆ ನೀಡಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ರಾಜ್ಯದ 5 ಜಿಲ್ಲಾಸ್ಪತ್ರೆಗಳಲ್ಲಿ ₹137.75 ಕೋಟಿ ವೆಚ್ವದಲ್ಲಿ 50 ಬೆಡ್ಗಳ ಕ್ರಿಟಿಕಲ್ ಕೇರ್ ಘಟಕಗಳ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ.ಬೆಂಗಳೂರು ನಗರ ಜಿಲ್ಲೆಯ ಸಿ.ವಿ ರಾಮನ್ ಸಾರ್ವಜನಿಕ ಆಸ್ಪತ್ರೆಯಲ್ಲಿ 100 ಬೆಡ್ಗಳ ಕ್ರಿಟಿಕಲ್ ಕೇರ್ ಘಟಕಕ್ಕೆ ₹45 ಕೋಟಿ, ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆ, ವಿಜಯನಗರ ಜಿಲ್ಲಾಸ್ಪತ್ರೆ, ದೊಡ್ಡಬಳ್ಳಾಪುರ ಹಾಗೂ ರಾಮನಗರ ಜಿಲ್ಲಾಸ್ಪತ್ರೆಗಳಲ್ಲಿ 50 ಬೆಡ್ಗಳ ಕ್ರಿಟಿಕಲ್ ಕೇರ್ ಘಟಕಗಳನ್ನು ತಲಾ ₹24 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲು ಸಚಿವ ಸಂಪುಟದಲ್ಲಿ ಒಪ್ಪಿಗೆ ಸಿಕ್ಕಿದೆ.
ರಾಷ್ಟ್ರೀಯ ಆರೋಗ್ಯ ಯೋಜನೆ PM-ABHIM ಅಡಿ ಅನುದಾನ ದೊರೆಯಲಿದ್ದು ರಾಜ್ಯ ಸರ್ಕಾರ ಕೂಡ ತನ್ನ ಪಾಲಿನ ವೆಚ್ಚವನ್ನ ಭರಿಸಲಿದೆ.
ಎಲ್ಲರಿಗೂ ಆರೋಗ್ಯ ಎಲ್ಲೆಡೆಯೂ ಆರೋಗ್ಯ ಎಂಬ ಧ್ಯೇಯದೊಂದಿಗೆ ಆರೋಗ್ಯವಂತ ಕರ್ನಾಟಕ ನಿರ್ಮಾಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.