ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿದ ಕೆ ಎಸ್.ಆರ್.ಟಿ.ಸಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಯಲ್ಲಾಪುರ ಹಳಿಯಾಳ ರಾಜ್ಯ ಹೆದ್ದಾರಿ ಕಣ್ಣಿಗೇರಿ ಬಳಿ ಮಂಗಳವಾರ ಸಂಭವಿಸಿದೆ.
ಬಸ್ಸಿನಲ್ಲಿದ್ದ ಹೆಚ್ಚಿನವರು ಪ್ರಾಣಾಪಾಯದಿಂದ ಪಾರಾಗಿದ್ದು ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಉಳಿದ ಎಂಟು ಮಂದಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.