ಬೆಂಗಳೂರು: ದಿನೇ ದಿನೇ ಕರ್ನಾಟಕದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿವೆ.ಈ ಹೃದಯಾಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಇದೀಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಅದೇ ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಿಗೂ ಸ್ಟೆಮಿ ಯೋಜನೆ ವಿಸ್ತರಣೆಗೆ ನಿರ್ಧರಿಸಿರುವುದಾಗಿ ಆರೋಗ್ಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಮಾಹಿತಿ ನೀಡಿದ್ದಾರೆ.
ರಾಜ್ಯಾಧ್ಯಂತ ಎಲ್ಲಾ ತಾಲ್ಲೂಕುಗಳಲ್ಲಿ ಸ್ಟೆಮಿ ಯೋಜನೆ ವಿಸ್ತರಣೆ ಮಾಡಲಾಗುತ್ತಿದೆ. ಈ ಮೊದಲು 86 ತಾಲ್ಲೂಕು ಕೇಂದ್ರಗಳಲ್ಲಿ ಮಾತ್ರವೇ ಸ್ಟೆಮಿ ಯೋಜನೆ ಇತ್ತು. ಮುಂದಿನ ವರ್ಷದೊಳಗೆ ಎಲ್ಲಾ ತಾಲ್ಲೂಕು ಕೇಂದ್ರಗಳಲ್ಲೂ ಯೋಜನೆ ಆರಂಭಗೊಳ್ಳಲಿದೆ ಎಂದರು.
ಅಂದಹಾಗೇ ರಾಜ್ಯ ಸರ್ಕಾರ ರಾಜ್ಯಾಧ್ಯಂತ ವಿಸ್ತರಿಸುತ್ತಿರುವಂತ ಸ್ಟೆಮಿ ಯೋಜನೆ ಅಂದರೆ ಹಬ್ ಆಂಡ್ ಸ್ಟೋಕ್ ಮಾಡೆಲ್ ಎಂಬುದಾಗಿದೆ. ಈ ಯೋಜನೆಯ ಅಡಿಯಲ್ಲಿ ತಾಲ್ಲೂಕು ಕೇಂದ್ರಗಳಲ್ಲೇ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು ವೈದ್ಯಕೀಯ ನೆರವು ಸಿಗಲಿದೆ. ಆ ಮೂಲಕ ಪ್ರಾಣಾಪಾಯದಿಂದ ಹೃದಯಾಘಾತಕ್ಕೆ ಒಳಗಾದವರನ್ನು ಪಾರು ಮಾಡುವಂತ ಚಿಕಿತ್ಸಾ ವಿಧಾನ ಇದಾಗಿದೆ.