ಹಾಲು ಉತ್ಪಾದಕರ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡ ಸರ್ಕಾರ : ತಕ್ಷಣ ಬಿಡುಗಡೆ ಮಾಡದಿದ್ರೆ ಹೋರಾಟ : ಬಿವೈ ವಿಜಯೇಂದ್ರ

ಬೆಂಗಳೂರು: ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಬಾಕಿ ಉಳಿಸಿಕೊಂಡಿದೆ ಹಣ ಬಾಕಿ ಉಳಿಸಿಕೊಂಡಿದ್ದರಿಂದ ಹಾಲು ಉತ್ಪಾದನೆಯು ಕುಂಠಿತಗೊಂಡಿದೆ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಈ ಕುರಿತು ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.

ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು ಹೀಗಾಗಿ ಪ್ರತಿನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು.ಆದರೆ ಕಾಂಗ್ರೆಸ್ ಸರ್ಕಾರ 716 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ.

ಇದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆಯಾಗಿದೆ ಜನ ಅಷ್ಟೇ ಅಲ್ಲ ಜಾನುವಾರುಗಳು ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ.

ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕು ಬಲಿಯಾಗಿದೆ.ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಕೈ ತೋರಿಸುತ್ತದೆ ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಜನ ಮತ್ತು ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ ಪದೇ ಪದೇ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲವೆಂದು ಟೀಕಿಸುತ್ತಾರೆ ನಾನು ಆ ಪದ ಬಳಸಲ್ಲ ಸರ್ಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು

Latest Indian news

Popular Stories