ಸರ್ಕಾರಿ ಮಹಿಳಾ ನೌಕರ’ರಿಗೆ ಫೆ.23ರಂದು ‘ಅರ್ಧದಿನ ವಿಶೇಷ ಸಾಂದರ್ಭಿಕ ರಜೆ’ ಮಂಜೂರು

ಬೆಂಗಳೂರು: ಫೆಬ್ರವರಿ.23ರಂದು ಕರ್ನಾಟಕ ಸರ್ಕಾರಿ ಮಹಿಳಾ ನೌಕರರ ಸಂಘದಿಂದ ವಿಚಾರ ಸಂಕೀರ್ಣ ಹಮ್ಮಿಕೊಳ್ಳಲಾಗಿದೆ. ಈ ವಿಚಾರ ಸಂಕೀರ್ಣದಲ್ಲಿ ಭಾಗಿಯಾಗೋದಕ್ಕೆ ಅನುಕೂಲ ಕಲ್ಪಿಸೋ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದ ಮಹಿಳಾ ಸರ್ಕಾರಿ ನೌಕರರಿಗೆ ಅರ್ಧ ದಿನ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶಿಸಿದೆ.

ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ದಿನಾಂಕ 23-02-2024ರಂದು ಅಖಿಲ ಕರ್ನಾಟಕ ಸರ್ಕಾರಿ ನೌಕರರ ಮಹಿಳಾ ಸಂಘದ ವತಿಯಿಂದ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನ ಅಂದರೆ ಟೌನ್ ಹಾಲ್ ನಲ್ಲಿ ವಿಚಾರ ಸಂಕೀರ್ಣ ನಡೆಯಲಿದೆ ಎಂದಿದ್ದಾರೆ.

ಈ ಹಿನ್ನಲೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿವಿಧ ಇಲಾಖೆಯ ಮಹಿಳಾ ನೌಕರರು ಭಾಗವಹಿಸಲು ಅನುಕೂಲವಾಗುವಂತೆ ಅರ್ಧ ದಿನದ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ

Latest Indian news

Popular Stories