ಅಂಗನವಾಡಿ ಕಾರ್ಯಕರ್ತೆಯರಿಗೆ ಭರ್ಜರಿ ಗುಡ್ ನ್ಯೂಸ್ : ‘ಸ್ಮಾರ್ಟ್ ಫೋನ್’ ವಿತರಣೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಕರ್ನಾಟಕ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ನಡುವೆ ಆರಂಭದಲ್ಲಿ ಅವರು ಕೇಂಧ್ರ ಸ್ಕಾರ ವಿರುದ್ದ ಕಿಡಿಕಾರಿದ್ದಾರೆ. ಕಾಂಗ್ರೆಸ್ ಸರ್ಕಾರ ರೂಪಿಸಿರುವ ಗ್ಯಾರಂಟಿ ಯೋಜನೆಗಳು ಚುನಾವಣಾ ಗಿಮಿಕ್​ಗಳಲ್ಲ.

ಬಡವರ ಏಳಿಗೆಗಾಗಿ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಕೈಗೊಂಡಿದೆ ಅಂತ ತಿಳಿಸಿದ್ದಾರೆ. ಇನ್ನೂ ಬಜೆಟ್​​ನ ಒಟ್ಟು ಗಾತ್ರ 3,71,383 ಕೋಟಿ ರೂ. ಎಂದು ತಿಳಿಸಿದರು.

14 ಬಾರಿ ಬಜೆಟ್ ಮಂಡಿಸಿ ದಾಖಲೆ ಮಾಡಿರುವ ಸಿಎಂ ಸಿದ್ದರಾಮಯ್ಯ ಇಂದು ತಮ್ಮ 15ನೇ ಆಯವ್ಯಯವನ್ನು ಮಂಡಿಸುತ್ತಿದ್ದಾರೆ. ಈ ಬಾರಿ ಬಜೆಟ್​ ಪ್ರತಿಗಳನ್ನು ಸರ್ಕಾರಿ ಸ್ವಾಮ್ಯದ ಲೀಡ್ಕರ್ ಸಂಸ್ಥೆಯ ಬ್ಯಾಗ್​ನಲ್ಲಿ ಸಿಎಂ ತೆಗೆದುಕೊಂಡು ಬಂದು, ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.

ಇನ್ನೂ ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್‌ ಫೋನ್‌ 20 ಸಾವಿರ ಅಂಗನವಾಡಿ ಕಾರ್ಯಕರ್ತೆಯರಿಗೆ ತರಬೇತಿ ನೀಡಲಾಗುವುದು ಎಂದು ಹೇಳಿದರು. ಇದಲ್ಲದೇ ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು. ಶಿವಮೊಗ್ಗದ ಸೋಗಾನೆ, ವಿಜಯಪುರದ ಇಟ್ಟಂಗಿಹಾಳ, ಬೆಂಗಳೂರು ಗ್ರಾ. ಜಿಲ್ಲೆ ಮೂಗೆನಹಳ್ಳಿ ಬಳಿ ಆಹಾರ ಪಾರ್ಕ್​ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದರು

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ) ಆಯೋಜಿಸಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯನ್ನು ಈಡೇರಿಸಿರುವುದಕ್ಕೆ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು ಧನ್ಯವಾದ ಸಲ್ಲಿಸಿದ್ದಾರೆ.

Latest Indian news

Popular Stories