ಲೋಕಸಭಾ ಚುನಾವಣೆಯಲ್ಲಿ ನಾನು ಈ ಬಾರಿ ಸ್ಪರ್ಧಿಸಲ್ಲ : ಮಾಜಿ ಪ್ರಧಾನಿ HD ದೇವೇಗೌಡ ಸ್ಪಷ್ಟನೆ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಹೆಚ್​ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡುವ ಬಗ್ಗೆ ನಿರ್ಧಾರ ಮಾಡಿಲ್ಲ ಎಂದು ಹೇಳಿದರು.

ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ಎಂದು ತಿಳಿಸಿದರು.

ಬೆಂಗಳೂರಿನ ಜೆಡಿಎಸ್​​ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,ನಾನು ಈ ಸಲ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ. ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ನನಗೆ 91 ವರ್ಷ ವಯಸ್ಸಾಗಿದೆ. ಜ್ಞಾಪಕ ಶಕ್ತಿ ಇದೆ, ಓಡಾಡಲು ಕಷ್ಟವಾಗುತ್ತದೆ.ಇನ್ನೂ ಎರಡು ವರ್ಷಗಳ ಕಾಲ ರಾಜ್ಯಸಭಾ ಸದಸ್ಯ ಅವಧಿ ಇದೆ. ಜೆಡಿಎಸ್, ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತೇನೆ ಎಂದರು.

ಹಾಸನ ಲೋಕಸಭಾ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಅಥವಾ ಡಾ.ಮಂಜುನಾಥ್ ಯಾರು ಸ್ಪರ್ಧೆ ಮಾಡುತ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯಾಕೆ ಆ ಸಮಸ್ಯೆಗಳು? ಪ್ರಜ್ವಲ್​ಗೆ ಪ್ರಧಾನಿ ಮೋದಿ ಅವರು ಆಶೀರ್ವಾದ ಮಾಡಿದ್ದಾರೆ. ಹೆಚ್​ಡಿ ಕುಮಾರಸ್ವಾಮಿ ಅವರು ಕೂಡಾ ಆಶೀರ್ವಾದ ಮಾಡುತ್ತಾರೆ ಎಂದರು.

Latest Indian news

Popular Stories