ಬೆಂಗಳೂರು: ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ)ನ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಇಂದು ಬೆಳಿಗ್ಗೆ ಚೆನ್ನೈನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ದಾಸ್ ಅವರು ಸೋಮವಾರ ಕಾರ್ಯನಿಮಿತ್ಯ ಚೆನ್ನೈಗೆ ಭೇಟಿ ನೀಡಿದ್ದರು. ಇಂದು ಬೆಳಿಗ್ಗೆ ಎದೆಯುರಿಯಿಂದ ಬಳಲುತ್ತಿದ್ದ ಅವರನ್ನು ಸನಿಹದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಶೀಘ್ರವೇ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ’ ಎಂದು ಆರ್‌ಬಿಐ ವಕ್ತಾರರು ತಿಳಿಸಿದ್ದಾರೆ.
ಸದ್ಯ ಚೆನ್ನೈನಲ್ಲಿನ ಅಪೋಲೊ ಆಸ್ಪತ್ರೆಯಲ್ಲಿ ಶಕ್ತಿಕಾಂತ್ ದಾಸ್ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ಚಿಕಿತ್ಸೆ ಪಡೆದು ಇಂದು ಮಧ್ಯಾಹ್ನವೇ ಅವರು ಬಿಡುಗಡೆಯಾಗಲಿದ್ದಾರೆ. ಯಾರೂ ಹೆದರಿಕೊಳ್ಳುವ ಅಗತ್ಯವಿಲ್ಲ’ ಎಂದು ಆರ್‌ಬಿಐ ವಕ್ತಾರರು ತಿಳಿಸಿದ್ದಾರೆ.