ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆ ಜೋರು, ಯೆಲ್ಲೋ ಅಲರ್ಟ್

ಬೆಂಗಳೂರು ಸೇರಿ ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.
ನಂಜನಗೂಡಿನಲ್ಲಿ ಅತಿ ಹೆಚ್ಚು ಮಳೆಯಾಗಿದೆ, ಕೃಷ್ಣರಾಜಸಾಗರ, ಚಾಮರಾಜನಗರ, ಹೊನಕೆರೆ, ಮಿಡಿಗೇಶಿ, ಕೋಲಾರ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಭಾಗಮಂಡಲ, ದೇವನಹಳ್ಳಿ, ಕೊಳ್ಳೇಗಾಲ, ಮಂಡ್ಯದಲ್ಲಿ ಮಳೆಯಾಗಿದೆ. ಕಲಬುರಗಿಯಲ್ಲಿ 44.5 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಇಂದು ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಬಿರುಗಾಳಿ ಸಹಿತ ಮಳೆ ಸುರಿಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಬನಶಂಕರಿ, ಲಾಲ್​ಬಾಗ್​, ಜೆಪಿನಗರ, ಜಯನಗರ ಕಡೆಗಳಲ್ಲಿ ಮಳೆಯಾಗಿದೆ. ಎಚ್​ಎಎಲ್​ನಲ್ಲಿ 37.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 38.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.2ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Latest Indian news

Popular Stories