ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ; ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯಾದ್ಯಂತ ಜೂನ್‌ 10ರಂದು ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ರೆಡ್‌ ಅಲರ್ಟ್‌ ಘೋಷಣೆ (Red Alert) ಮಾಡಲಾಗಿದೆ. ಕರಾವಳಿಯಲ್ಲಿ ಸಾಧಾರಣದಿಂದ ಭಾರಿ (Rain News) ಮಳೆಯಾಗಲಿದೆ. ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ವ್ಯಾಪಕವಾಗಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕೆಲವೊಮ್ಮೆ ಗುಡುಗು, ಮಿಂಚು ಇರಲಿದೆ.

ಮಲೆನಾಡಿನ ಹಾಸನ, ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಚದುರಿದಂತೆ ಮಳೆಯಾಗುವ ನಿರೀಕ್ಷೆ ಇದೆ.

Latest Indian news

Popular Stories