ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಇನ್ಮುಂದೆ ಹೆಲ್ಮೆಟ್ ಕಡ್ಡಾಯ : ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ರಾಜ್ಯದ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹೆಲೈಟ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದ ವಿವಿಧ ಘಟಕಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಹೆಲ್ಮಟ್ ಧರಿಸದೇ, ರಸ್ತೆ ಅಪಘಾತಗಳು ಉಂಟಾಗಿ, ಕೆಲವು ಪೊಲೀಸ್ ಅಧಿಕಾರಿ / ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿದ್ದು ಮತ್ತು ಕೆಲವರು ಮೃತಪಟ್ಟಿರುವ ಘಟನೆಗಳು ಸಂಭವಿಸಿರುವುದು ಕಂಡು ಬಂದಿರುತ್ತದೆ.

ಆದ್ದರಿಂದ, ಇನ್ನು ಮುಂದೆ ಇಂತಹ ಘಟನೆಗಳನ್ನು ತಪ್ಪಿಸಲು, ರಾಜ್ಯಾದ್ಯಂತ ಎಲ್ಲಾ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) & (ಬಿ) ರಲ್ಲಿ ನಮೂದಿಸಿರುವಂತೆ ಹಾಗೂ ಸೂಚಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು ಧರಿಸಿ, ಸದರಿ ಹೆಲ್ಮಟ್ ಅನ್ನು ಭದ್ರವಾಗಿ ಕಟ್ಟಿಕೊಳ್ಳುವುದು.

ಮೋಟಾರು ವಾಹನ ಕಾಯ್ದೆಯ ಕಲಂ 129 (ಎ) & (ಬಿ) ರಡಿಯಲ್ಲಿ ಹೆಲ್ಮಟ್ ನ ನಿರ್ದಿಷ್ಟತೆಯ ಬಗ್ಗೆ ವಿವರಿಸಿದ್ದು ಆ ಪಕಾರ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳು ತಮ್ಮ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಸುರಕ್ಷಿತ ಹೆಲ್ಮಟ್ ಅನ್ನು ಧರಿಸುವಂತ ನಿರ್ದೇಶನಗಳನ್ನು ನೀಡಿ, ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

Latest Indian news

Popular Stories