ಬೆಂಗಳೂರು: ಮಾಜಿ ಸಚಿವ ಶ್ರೀರಾಮುಲುಗೆ ಸಂಕಷ್ಟ ಎದುರಾಗಿದೆ. 2023ರಲ್ಲಿ ದಾಖಲಾಗಿದ್ದ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ರದ್ದು ಕೋರಿ ಶ್ರೀರಾಮುಲು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ಇದೇ ವೇಳೆ ಶ್ರೀರಾಮುಲು ಅವರಿಗೆ ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಹಾಜರಾಗುವಂತೆ ಸೂಚಿಸಿದೆ.ನಾಲ್ಕು ಬಾರಿ ಸಮನ್ಸ್ ನೀಡಿದರೂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಗೆ ಹಾಜರಾಗಲೇಬೇಕು. ಒಂದು ವೇಳೆ ಮುಂದಿನ ವಿಚಾರಣೆಗೆ ಹಜರಾಗದಿದ್ದರೆ ಬಂಧನ ವಾರೆಂಟ್ ಜಾರಿಮಾಡಬೇಕಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದೆ.
2023ರ ವಿಧಾನಸಭಾ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣ ಸಂಬಂಧ ಶ್ರೀರಾಮುಲು ವಿರುದ್ಧ ಪ್ರಕರಣ ದಾಖಲಾಗಿತ್ತು. ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟರೂ ವಿಚಾರಣೆಗೆ ಹಾಜರಾಗದೇ, ಪ್ರಕರಣ ರದ್ದು ಕೋರಿ ಶ್ರೀರಾಮುಲು ಹೈಕೋರ್ಟ್ ಮೊರೆ ಹೋಗಿದ್ದರು.