ರಮೇಶ್ ಜಾರಕಿಹೊಳಿಯನ್ನು ಅರೆಸ್ಟ್ ಮಾಡದಂತೆ ಹೈಕೋರ್ಟ್ ಸೂಚನೆ‌

ಬೆಂಗಳೂರು ಮಾರ್ಚ್‌ 15: ಅಪೆಕ್ಸ್ ಬ್ಯಾಂಕ್​ಗೆ ಸಾಲ ಪಾವತಿಸದೆ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಸೂಚಿಸಿದೆ.ಲೋಕಸಭಾ ಚುನಾವಣೆಯ ತಯಾರಿ ಒಂದು ಕಡೆಯಾದ್ರೆ, ಇತ್ತ ತಮ್ಮ ತಮ್ಮ ವಿರುದ್ಧ ದಾಖಲಾಗಿರುವ ಸಹಕಾರಿ ಬ್ಯಾಂಕ್​ಗೆ ವಂಚನೆ ಪ್ರಕರಣವನ್ನು ರದ್ದುಕೋರಿ ಮಾಜಿ ಸಚಿವ ಹಾಗೂ ಗೋಕಾಕ್‌ ಸಾಹುಕಾರ್‌ ರಮೇಶ್ ಜಾರಕಿಹೊಳಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿದ್ದು, ಈ ವೇಳೆ ಸರ್ಕಾರದ ಪರ ಎಸ್​ಪಿಪಿ ಬ್ಯಾತ ಎನ್ ಜಗದೀಶ್ ವಾದ ಮಾಡಿ ಸಿಐಡಿ ನೋಟಿಸ್ ನೀಡಿದರೂ ತನಿಖೆಗೆ ಹಾಜರಾಗಿಲ್ಲ ಎಂದು ಹೈಕೋರ್ಟ್​ಗೆ ತಿಳಿಸಿದರು.

ಸಿಐಡಿ ನೋಟಿಸ್ ನೀಡಿದರೂ ರಮೇಶ್ ಜಾರಕಿಹೊಳಿ ತನಿಖೆಗೆ ಹಾಜರಾಗಿಲ್ಲ‌ ಎಂದು ಕೋರ್ಟ್‌ ಗಮನಕ್ಕೆ ತಂದರು. ಈ ವೇಳೆ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಸಿಐಡಿ ತನಿಖೆಗೆ ಸಹಕರಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಇನ್ನು ವಿಚಾರಣೆಗೆ ಹಾಜರಾದರೆ ರಮೇಶ್ ಜಾರಕಿಹೊಳಿಯನ್ನು ಬಂಧಿಸದಂತೆ ಸಿಐಡಿಗೆ ಸೂಚಿಸಿದೆ. ಇದರಿಂದ ರಮೇಶ್ ಜಾರಕಿಹೊಳಿಗೆ ಕೊಂಚ ರಿಲೀಫ್ ಸಿಕ್ಕಂತಾಗಿದೆ.ಶಾಸಕ ರಮೇಶ್ ಜಾರಕಿಹೊಳಿಗೆ ತಾತ್ಕಾಲಿಕ ರಿಲೀಫ್: ಬಂಧನ ಭೀತಿಯಿಂದ ಪಾರು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಲಿಮಿಟೆಡ್ ಕಂಪನಿಗಾಗಿ ಅಪೆಕ್ಸ್ ಬ್ಯಾಂಕ್​ನಿಂದ 232 ಕೋಟಿ 88 ಲಕ್ಷರೂಪಾಯಿ ಸಾಲ ಪಡೆದಿದ್ದರು.

ಇದು ರಮೇಶ್ ಜಾರಕಿಹೊಳಿ ಒಡೆತನದ್ದು, ಆದರೆ, ಸಾಲವನ್ನು ವಾಪಸ್ ಕಟ್ಟಿಲ್ಲ. ಹೀಗಾಗಿ ಸಾಲ ಮರುಪಾವತಿಸದೇ ಬ್ಯಾಂಕ್​ಗೆ ವಂಚನೆ ಮಾಡಿದ್ದಾರೆ ಎಂದು ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದರು.ಈ ದೂರು ರದ್ದುಗೊಳಿಸುವಂತೆ ರಮೇಶ್ ಜಾರಕಿಹೊಳಿ ಹೈಕೋರ್ಟ್ ಮೆಟ್ಟಿಲೇರಿದ್ದು, ಕಂಪನಿಯ ಹುದ್ದೆಗಳಿಗೆ ರಾಜಿನಾಮೆ ನೀಡಿ ಹೊಸಬರ ನೇಮಕವಾಗಿದೆ.ಎನ್​​ಸಿಎಲ್​ಟಿಯಲ್ಲಿ ವಿಚಾರಣೆ ಇರುವಾಗ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.ಈ ಹಿನ್ನೆಲೆಯಲ್ಲಿ ಕ್ರಿಮಿನಲ್‌ ಪ್ರಕರಣವನ್ನು ರದ್ದುಗೊಳಿಸಬೇಕೆಂದು ಕೋರ್ಟ್​ಗೆ ಮನವಿ ಮಾಡಿದ್ದಾರೆ.

Latest Indian news

Popular Stories