ಲಿಕ್ವಿಡ್ ನೈಟ್ರೋಜನ್ ಪಾನ್ ತಿಂದ 12 ವರ್ಷದ ಹುಡುಗಿ ಆಸ್ಪತೆಗೆ ದಾಖಲು

ಬೆಂಗಳೂರು: ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಮದುವೆಯ ಆರತಕ್ಷತೆ ಸಮಾರಂಭದಲ್ಲಿ 12 ವರ್ಷದ ಬಾಲಕಿಯೊಬ್ಬಳು ಲಿಕ್ವಿಡ್ ನೈಟ್ರೋಜನ್ ತುಂಬಿದ ಪಾನ್ ಸೇವಿಸಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಎಚ್‌ಎಸ್‌ಆರ್ ಲೇಔಟ್‌ನಲ್ಲಿ ನಡೆದಿದೆ. ಆಸ್ಪತ್ರೆಯು ಆಕೆಯ ಹೊಟ್ಟೆಯಲ್ಲಿ ರಂಧ್ರವಾಗಿದ್ದನ್ನು ಗಮನಿಸಿದೆ.

ಬಾಯಲ್ಲಿ ಹಾಕಿದ ಕೂಡಲೇ ಹೊಗೆ ತರಿಸುವ ಈ ಲಿಕ್ವಿಡ್ ನೈಟ್ರೋಜನ್ ಪಾನ್ ಇತ್ತೀಚೆಗೆ ಟ್ರೆಂಡ್ ಆಗಿದೆ. ಆದರೆ, ಟ್ರೆಂಡಿ ಫುಡ್‌ಗಳ ಹಿಂದೆ ಅಡಗಿರುವ ಅಪಾಯಗಳ ಬಗ್ಗೆ ಪ್ರತಿಯೊಬ್ಬರೂ ಅರಿತಿರಬೇಕು.

ಬಾಲಕಿಯನ್ನು ಇಂಟ್ರಾಆಪರೇಟಿವ್ OGD ಸ್ಕೋಪಿಯೊಂದಿಗೆ ಪರಿಶೋಧನಾತ್ಮಕ ಲ್ಯಾಪರೊಟಮಿಗೆ ಒಳಪಡಿಸಲಾಯಿತು. ಅಲ್ಲಿ ಅನ್ನನಾಳ, ಹೊಟ್ಟೆ ಮತ್ತು ಡ್ಯುವೋಡೆನಮ್ ಅನ್ನು ಪರೀಕ್ಷಿಸಲು ಎಂಡೋಸ್ಕೋಪ್ ಬಳಸಲಾಯಿತು. ಈ ಸಂದರ್ಭದಲ್ಲಿ ಹೊಟ್ಟೆಯಲ್ಲಿ ಸುಮಾರು 4×5 ಸೆಂ.ಮೀ ಅಳತೆಯ ಅನಾರೋಗ್ಯಕರ ಪ್ಯಾಚ್ ಕಂಡುಬಂದಿದೆ.

ನಂತರ ಬಾಲಕಿಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು, ಹೊಟ್ಟೆಯ ಒಂದು ಭಾಗವನ್ನು ತೆಗೆದುಹಾಕಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ ಎಂರಡು ದಿನ ಐಸಿಯುನಲ್ಲಿದ್ದ ಬಾಲಕಿ, 6 ದಿನಗಳ ಆಸ್ಪತ್ರೆ ಮೇಲ್ವಿಚಾರಣೆ ಬಳಿಕ ಮನೆಗೆ ಮರಳಿದ್ದಾಳೆ.

ಆಹಾರದ ಪ್ರಯೋಗಗಳ ಬಗ್ಗೆ ಎಚ್ಚರವಾಗಿರಿ
ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಗ್ಯಾಸ್ಟ್ರೋಎಂಟರಾಲಜಿಯ ಆಪರೇಟಿಂಗ್ ಸರ್ಜನ್ ಡಾ.ವಿಜಯ್ ಎಚ್.ಎಸ್ ಮಾತನಾಡಿ, ದೇಶದ ವಿವಿಧ ಭಾಗಗಳಿಂದ ಇಂತಹ ಹಲವಾರು ಪ್ರಕರಣಗಳು ವರದಿಯಾಗಿವೆ ಮತ್ತು ಈ ಘಟನೆಗಳನ್ನು ಗಂಭೀರವಾಗಿ ಪರಿಗಣಿಸುವುದು ಬಹಳ ಮುಖ್ಯ ಎಂದು ಹೇಳಿದರು.ಆಹಾರದಲ್ಲಿ ಪ್ರಯೋಗದ ಅಭ್ಯಾಸಗಳಿಗೆ ಸಂಬಂಧಿಸಿದ ಅಂತರ್ಗತ ಅಪಾಯಗಳು ಮತ್ತು ಸುರಕ್ಷತಾ ಕ್ರಮಗಳ ಅಗತ್ಯವನ್ನು ಅವರು ಸೂಚಿಸುತ್ತಾರೆ.

Latest Indian news

Popular Stories