ಬೆಂಗಳೂರು: ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ವಾಟರ್ ಟ್ಯಾಂಕರ್ ಹರಿದ ಪರಿಣಾಮ ಬೈಕ್ ಸವಾಋ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೊತ್ತನೂರು ದಿಣ್ಣೆ ಸಮೀಪದ ಆರ್ ಬಿಐ ಲೇಔಟ್ ನಲ್ಲಿ ಘಟನೆ ನಡೆದಿದ್ದು, ಹಿಂಬದಿಯಿಂದ ಬೈಕ್ ಗೆ ಟ್ಯಾಂಕರ್ ಡಿಕ್ಕಿ ಹೊಡೆದು ಪರಿಣಾಮ ರಸ್ತೆ ಬಿದ್ದ ಬೈಕ್ ಸವಾರನ ತಲೆ ಮೇಲೆ ಹತ್ತಿ ಹೋಗಿದ್ದು, ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮೃತ ಯುವಕನನ್ನು ಕಿರಣ್ ಎಂದು ಗುರುತಿಸಲಾಗಿದೆ. ಕಿರಣ್ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ. ಸದ್ಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.