
ಕೃಷಿ ನವೋದ್ಯಮ ಯೋಜನೆ; 20 ಲಕ್ಷದ ತನಕ ಸಬ್ಸಿಡಿ
ಬೆಂಗಳೂರು; ಕರ್ನಾಟಕ ಸರ್ಕಾರ ಕೃಷಿ ಕ್ಷೇತ್ರದಲ್ಲಿ ಉದ್ಯಮಶೀಲತೆಯನ್ನು ಹೆಚ್ಚಿಸಲು ಹಾಗೂ ಗ್ರಾಮೀಣ ಭಾಗದ ಯುವಕರಿಗೆ ಉದ್ಯೋಗ ಸೃಜಿಸುವ ನಿಟ್ಟಿನಲ್ಲಿ ‘ಕೃಷಿ ನವೋದ್ಯಮ’ ಎಂಬ ಹೊಸ ಯೋಜನೆ ಜಾರಿಗೊಳಿಸುತ್ತಿದೆ.
ಕೃಷಿ ವಲಯಲ್ಲಿನ ನೂತನ ತಾಂತ್ರಿಕತೆಗಳು, ಆವಿಷ್ಕಾರ ಹಾಗೂ ನವೀನ ಪರಿಕಲ್ಪನೆಗಳ ಸೇವೆಗಳನ್ನು ಒಳಗೊಂಡ ವಾಣಿಜ್ಯೀಕರಣವನ್ನು ಉತ್ತೇಜಿಸುವ ಗುರಿಯೊಂದಿಗೆ ನೂತನ ಯೋಜನೆ ಅನುಷ್ಠಾನಗೊಳ್ಳುತ್ತಿದೆ.
ರೈತರಿಗೆ ವರದಾನವಾದ ಕೃಷಿ ಭಾಗ್ಯ ಯೋಜನೆ: ಕೋಲಾರ ಬೆಳೆಗಳಿಗೆ ಸುಲಭ ನೀರಾವರಿ ವ್ಯವಸ್ಥೆ.ಈ ಯೋಜನೆಯಡಿ ಗರಿಷ್ಠ 20 ಲಕ್ಷ ರೂ. ವರೆಗೆ ಸಹಾಯಧನ ನೀಡಲಾಗುತ್ತದೆ. ಕೃಷಿ ಪದವೀಧರರು, ವಿದ್ಯಾವಂತ ಯುವಕರು, ಆಸಕ್ತ ಪ್ರಗತಿ ಪರ ರೈತರು ಹೊಸದಾಗಿ ಕೃಷಿಯಲ್ಲಿ ನವೋದ್ಯಮ ಸ್ಥಾಪಿಸಲು ಮುಂದೆ ಬರುವವರಿಗೆ ಸ್ಟಾರ್ಟಪ್ ಯೋಜನೆಯ ವರದಿಯ ಶೇ 50ರಷ್ಟು ಅಂದರೆ 5 ರಿಂದ 20 ಲಕ್ಷ ರೂ. ವರೆಗೆ ಸಬ್ಸಿಡಿ ಸಿಗಲಿದೆ.
ಆದ್ದರಿಂದ ರಾಜ್ಯ ಸರ್ಕಾರ ಕೃಷಿ ಉತ್ಪನ್ನಗಳ ಮಾರುಕಟ್ಟೆ, ಮೌಲ್ಯ ವರ್ಧನೆ ಪ್ರೋತ್ಸಾಹಿಸಲು ‘ಕೃಷಿ ನವೋದ್ಯಮ’ ಎಂಬ ಯೋಜನೆ ಜಾರಿಗೊಳಿಸುತ್ತಿದೆ. Tomato: ರೋಗ ನಿರೋಧಕ ಟೊಮೆಟೊ ತಳಿ ಅಭಿವೃದ್ಧಿ ಮಾಡುತ್ತಿರುವ ಕೃಷಿ ವಿಜ್ಞಾನಿಗಳು ಈ ಬಾರಿಯ ಬಜೆಟ್ ಮಂಡನೆ ಮಾಡಿದ ಹಣಕಾಸು ಖಾತೆ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ‘ಕೃಷಿ ನವೋದ್ಯಮ’ ಎಂಬ ಯೋಜನೆ ಘೋಷಣೆ ಮಾಡಿದ್ದರು.
ಅಲ್ಲದೇ 10 ಕೋಟಿ ರೂ. ಅನುದಾನವನ್ನು ಮೀಸಲಿಟ್ಟರು. ಮುಂದಿನ ಬಜೆಟ್‌ನಲ್ಲಿ ಇನ್ನಷ್ಟು ಅನುದಾನವನ್ನು ಸರ್ಕಾರ ಈ ಯೋಜನೆಗೆ ನೀಡಲು ಚಿಂತನೆ ನಡೆಸಿದೆ. ‘ಕೃಷಿ ನವೋದ್ಯಮ’ ಯೋಜನೆಯಡಿ ಹೊಸ ಯೋಜನೆ ಅಲ್ಲದೇ ಈಗಾಗಾಲೇ ಸ್ಥಾಪಿಸಲಾದ ನವೋದ್ಯಮಗಳ ವಿಸ್ತರಣೆ ಅಥವಾ ಮೇಲ್ದರ್ಜೆಗೇರಿಸಲು ಗೂ ಶೇ.50 ರಷ್ಟು ಸಹಾಯಧನ (20 ರಿಂದ ಗರಿಷ್ಠ 50 ಲಕ್ಷ ರೂ.) ವರೆಗೆ ಬ್ಯಾಂಕ್‌ನಿಂದ ಸಾಲದ ಮೂಲಕ ನೀಡಲಾಗುತ್ತದೆ.
ನವೋದ್ಯಮಗಳನ್ನು ಗುರುತಿಸಲು ಜಿಲ್ಲಾ ಮಟ್ಟದಲ್ಲಿ, ರಾಜ್ಯ ಮಟ್ಟದಲ್ಲಿ ಕೃಷಿ ಇಲಾಖೆ ಅಧಿಕಾರಿಗಳ ನೇತೃತ್ವದಲ್ಲಿ ಸಮಿತಿಗಳನ್ನು ರಚನೆ ಮಾಡಲಾಗುತ್ತದೆ. ಸರ್ಕಾರ ಮೊದಲ ಹಂತದಲ್ಲಿ ಮೈಸೂರು, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಬೆಳಗಾವಿ, ವಿಜಯಪುರ, ದಾವಣಗೆರೆ, ಶಿವಮೊಗ್ಗ ಮತ್ತು ಬಳ್ಳಾರಿ ಹೀಗೆ ಎರಡನೇ ದರ್ಜೆಯ ನಗರಗಳಲ್ಲಿ ಇಂತಹ ನವೋದ್ಯಮ ಸ್ಥಾಪನೆ ಮಾಡಲು ಒತ್ತು ನೀಡಲಿದೆ.




