ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣ : ಬೆಂಗಳೂರಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

ಬೆಂಗಳೂರು: ಮಹಿಳೆ ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷ ಗೀತಾ ಸೇರಿ ಹಲವರು ಬೆಂಗಳೂರಿನ ಮೈಖ್ರಿ ಸರ್ಕಲ್ ನಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು ಅವರ ಜೊತೆಗೆ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಸೇರಿದಂತೆ ಬಿಜೆಪಿಯ ಕಾರ್ಯಕರ್ತರು ಭಾಗವಹಿಸಿದ್ದರು.

ಇದೆ ವೇಳೆ ಸುದ್ದಿಗಾರರ ನಿಗ ಮಾತನಾಡಿದ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಅವರು ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲದಂತಾಗಿದೆ ಹೆಣ್ಣು ಮಕ್ಕಳ ರಕ್ಷಣೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಎಡವಿದ್ದು ಸಂಪೂರ್ಣವಾಗಿ ವಿಫಲವಾಗಿದೆ.

ಬೆಳಗಾವಿಯಲ್ಲಿ ನಡೆದಿರುವಂತಹ ಈ ಅಮಾನವೀಯ ಘಟನೆಯನ್ನು ನಾವು ಸಂಸತ್ತಿನಲ್ಲಿ ಪ್ರಸ್ತಾಪಿಸುತ್ತೇವೆ. ರಾಜ ಕಾಂಗ್ರೆಸ್ ಸರ್ಕಾರದ ಈ ದುರಾಡಳಿತದಿಂದ ಜನರು ಬೇಸತ್ತಿದ್ದಾರೆ. ಈ ಘಟನೆಯಿಂದ ಸಿಎಂ ಸಿದ್ದರಾಮಯ್ಯ ಅವರ ಕುರ್ಚಿಯಿಂದ ಕೆಳಗಿಳಿಯಲು ಬಹುದು ಎಂದು ಸದಾನಂದ ಗೌಡ ವಾಗ್ದಾಳಿ ನಡೆಸದ್ದಾರೆ.

ಇದೆ ವೇಳೆ ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷ ಗೀತಾ ನೇತೃತ್ವದಲ್ಲಿ ಹಲವಾರು ಸಂಖ್ಯೆಯಲ್ಲಿ ಪಕ್ಷದ ಮಹಿಳೆಯರು ಕಾರ್ಯಕರ್ತರು ಸೇರಿದಂತೆ ಅನೇಕರು ಭಾಗವಹಿಸಿದ್ದರು ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದು ಪೊಲೀಸ್ ವಾಹನದಲ್ಲಿ ಕರೆದುಕೊಂಡು ಹೋದ ಘಟನೆ ಜರುಗಿತು

Latest Indian news

Popular Stories