
Bengaluru UrbanFeatured Story
ಬೆಂಗಳೂರು : ಆನಂದ್ ರಾವ್ ಸರ್ಕಲ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ – ವ್ಯಕ್ತಿ ಮೃತ್ಯು
ಬೆಂಗಳೂರು:ರಾತ್ರಿ 9:30 ರ ಸುಮಾರಿಗೆ ಬೆಂಗಳೂರಿನ ಆನಂದ್ ರಾವ್ ಸರ್ಕಲ್ನಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ವಾಹನ ಡಿಕ್ಕಿ ಹೊಡೆದಿದೆ ಪರಿಣಾಮ ಅಪರಿಚಿತ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
35 ರಿಂದ 40 ವರ್ಷದ ಅಪರಿಚಿತ ವ್ಯಕ್ತಿ ಫ್ಲೈಓವರ್ ಮೇಲೆ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನವೊಂದು ವೇಗವಾಗಿ ಬಂದು ಡಿಕ್ಕಿ ಹೊಡೆದಿದೆ.
ನಂತರ ವಾಹನ ಮೃತದೇಹವನ್ನು 20 ಮೀಟರ್ನಷ್ಟು ದೂರ ಎಳೆದೊಯ್ದಿದೆ. ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಉಪ್ಪಾರಪೇಟೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕಳಿಸಲಾಗಿದೆ.




