Bengaluru UrbanFeatured Story

ಸೆಕ್ಯೂರಿಟಿ ಅಲರ್ಟ್‌: ಬೆಂಗಳೂರಿನ ವಿಧಾನಸೌಧದಲ್ಲಿ ಭಾರೀ ಕಟ್ಟೆಚ್ಚರ

ಬೆಂಗಳೂರು ಡಿಸೆಂಬರ್‌ 15: ಕಲಾಪ ನಡೆಯುವ ಇಬ್ಬರು ವ್ಯಕ್ತಿಗಳು ವೇಳೆ ಸಂಸತ್ ಕಟ್ಟಡದೊಳಗೆ ನುಗ್ಗಿ ದಾಂಧಲೆ ಎಬ್ಬಿಸಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ವಿಧಾನಸೌಧದಲ್ಲೂ ಭಾರೀ ಕಟ್ಟೆಚ್ಚರ ವಹಿಸಲಾಗಿದೆ.

ಲೋಕಸಭೆಯಲ್ಲಿ ಬುಧವಾರ ಭಾರೀ ಭದ್ರತಾ ಲೋಪದ ನಂತರ, ಬೆಂಗಳೂರು ನಗರ ಪೊಲೀಸರು ಮುಂಜಾಗ್ರತೆ ವಹಿಸಿದ್ದು, ಬೆಂಗಳೂರಿನ ವಿಧಾನಸೌಧ ಮತ್ತು ವಿಕಾಸಸೌಧದಲ್ಲಿ ಸಾಕಷ್ಟು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಈ ಬಗ್ಗೆ ಮಾತನಾಡಿದ ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ, ವಿಧಾನಸೌಧ ಭದ್ರತೆಯನ್ನು ಉಪ ಪೊಲೀಸ್ ಆಯುಕ್ತ (ಡಿಸಿಪಿ) ಶ್ರೇಣಿಯ ಅಧಿಕಾರಿಯೊಬ್ಬರು ನೋಡಿಕೊಳ್ಳುತ್ತಾರೆ ಮತ್ತು ಕಟ್ಟುನಿಟ್ಟಾದ ಪ್ರೋಟೋಕಾಲ್ ಜಾರಿಯಲ್ಲಿತ್ತದೆ. ಅಧಿವೇಶನದ ಸಮಯದಲ್ಲಿ ವಿಧಾನಸಭೆ ಸಭಾಂಗಣದಲ್ಲಿ ಭದ್ರತೆಯನ್ನು ನೋಡಿಕೊಳ್ಳಲು ಪೊಲೀಸ್ ಸಿಬ್ಬಂದಿಯಲ್ಲದೆ ಮಾರ್ಷಲ್‌ಗಳು ಸಹ ಇರುತ್ತಾರೆ ಎಂದು ಅವರು ಹೇಳಿದರು.

ಅಧಿವೇಶನ ನಡೆಯುತ್ತಿರುವಾಗ ಯಾರನ್ನು ಒಳಗೆ ಬಿಡಲಾಗುತ್ತದೆ ಎಂಬುದಕ್ಕೆ ಕಟ್ಟುನಿಟ್ಟಾದ ಪ್ರೋಟೋಕಾಲ್ ಅನ್ನು ಅನುಸರಿಸಲಾಗುತ್ತದೆ. ಅಜಾಗರೂಕ ಘಟನೆಗಳು ಪುನರಾವರ್ತನೆಯಾಗದಂತೆ ನೋಡಿಕೊಳ್ಳಲು ನಾವು ಹಿಂದಿನ ನಿಯಮ ಉಲ್ಲಂಘನೆಗಳ ಆಧಾರದ ಮೇಲೆ ಪ್ರೋಟೋಕಾಲ್ ಅನ್ನು ಮರು ವಿನ್ಯಾಸ ಮಾಡಿದ್ದೇವೆ ಎಂದು ಹೇಳಿದ್ದಾರೆ

ಸಂಸತ್ತಿನ ಭದ್ರತಾ ಲೋಪದ ಹಿನ್ನೆಲೆಯಲ್ಲಿ ಗುರುವಾರ ವಿಧಾನಸೌಧ ಮತ್ತು ವಿಕಾಸಸೌಧದ ಪ್ರವೇಶದ್ವಾರದಲ್ಲಿ ಕಟ್ಟುನಿಟ್ಟಿನ ಕಾವಲು ಇರಿಸಲಾಗಿದೆ. ಚಳಿಗಾಲದ ಅಧಿವೇಶನ ನಡೆಯುತ್ತಿರುವ ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೂ ಭದ್ರತೆಯನ್ನು ಹೆಚ್ಚಿಸಲಾಗಿದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button