ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದೇ ವಾರದಲ್ಲಿ 9 ಜನರು ಕೋವಿಡ್ ಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಕಳೆದ 10 ದಿನಗಳಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 479ಕ್ಕೆ ಏರಿಕೆಯಾಗಿದೆ. 7 ದಿನದಲ್ಲಿ 9 ಜನರು ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.ಮೈ ಕೊರೆಯುವ ಚಳಿ ನಡುವೆ ಕೋವಿಡ್ ಆತಂಕದಲ್ಲಿ ಆಸ್ಪತ್ರೆಗೆ ಬರುವವರ ಸಂಖ್ಯೆಯೂ ಹೆಚ್ಚಿದೆ. ರಾಜಧಾನಿ ಬೆಂಗಳೂರಿನ ಆಸ್ಪತ್ರೆಗಳಲ್ಲಿ ಹೊರರೋಗಿಗಳ ಸಂಖ್ಯೆ ಶೇ.30ರಷ್ಟು ಏರಿಕೆಯಾಗಿದ್ದು, ಬಹುತೇಕ ಜನರು ನೆಗಡಿ, ಕೆಮ್ಮು, ಜ್ವರದಿಂದ ಬಳಲುತ್ತಿದ್ದಾರೆ.