ನಾಳೆ ‘ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞ’ರೊಂದಿಗೆ ‘ಸಿಎಂ ಸಿದ್ಧರಾಮಯ್ಯ’ ಮಹತ್ವದ ಸಭೆ

ಬೆಂಗಳೂರು: ಕೊರೋನಾ ರೂಪಾಂತರಿ ಜೆಎನ್1 ಭೀತಿ ಹಿನ್ನಲೆಯಲ್ಲಿ, ನಾಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಹತ್ವದ ಸಭೆಯನ್ನು ನಡೆಸಲಿದ್ದಾರೆ.

ನೆರೆಯ ಕೇರಳ ರಾಜ್ಯದಲ್ಲಿ ತುಸು ಕೊರೋನಾ ಜೆಎನ್1 ರೂಪಾಂತರಿ ಹೆಚ್ಚೇ ಇದೆ. ಈ ಹಿನ್ನಲೆಯಲ್ಲಿ ಈಗಾಗಲೇ ದೇಶಾದ್ಯಂತ ಕೇಂದ್ರ ಸರ್ಕಾರದಿಂದ ಕೋವಿಡ್ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ.ಇತ್ತ ಕರ್ನಾಟಕದಲ್ಲೂ ಕೊರೋನಾ ತಡೆಯ ಮುಂಜಾಗ್ರತಾ ಕ್ರಮವಾಗಿ ಮಾರ್ಗಸೂಚಿಯನ್ನು ಜಾರಿಗೊಳಿಸಲಾಗಿದೆ. 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಧರಿಸೋದು ಕಡ್ಡಾಯಗೊಳಿಸಲಾಗಿದೆ.

ಈ ಎಲ್ಲಾ ಕಾರಣದಿಂದ ನಾಳೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರೊಂದಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಹತ್ವದ ಸಭೆಯನ್ನು ನಡೆಸಲಿದ್ದಾರೆ. ನಾಳೆ ಮಧ್ಯಾಹ್ನ 1 ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆಯನ್ನು ನಡೆಸಲಿದ್ದು, ತಜ್ಞರೊಂದಿಗೆ ಚರ್ಚಿಸಿ ಕೋವಿಡ್ ತಡೆಗೆ ಮಹತ್ವದ ನಿರ್ಧಾರಗಳನ್ನು ಪ್ರಕಟಿಸೋ ಸಾಧ್ಯತೆ ಇದೆ

Latest Indian news

Popular Stories