ಜನವರಿಯಿಂದ 169 ಇಂದಿರಾ ಕ್ಯಾಂಟೀನ್ ಗಳಲ್ಲಿ ʻರಾಗಿ ಮುದ್ದೆʼ ಊಟ!

ಬೆಂಗಳೂರು:ಜನವರಿಯಿಂದ ಬೆಂಗಳೂರು ನಗರದಲ್ಲಿರುವ 169 ಇಂದಿರಾ ಕ್ಯಾಂಟೀನ್ ಗಳಲ್ಲಿ ʻರಾಗಿ ಮುದ್ದೆʼ ಊಟ ನೀಡಲು ನಿರ್ಧರಿಸಿದೆ.ಸದ್ಯ ಬೆಂಗಳೂರು ನಗರದ ಇಂದಿರಾ ಕ್ಯಾಂಟೀನ್‌ಗಳಲ್ಲಿ ರೈಸ್‌ಭಾತ್‌, ಉಪ್ಪಿಟ್ಟು, ಅನ್ನ, ಸಾಂಬಾರ್‌ ಮಾತ್ರ ಸಿಗುತ್ತಿತ್ತು.

ಇಂದಿರಾ ಕ್ಯಾಂಟೀನ್‌ ಗಳಿಗೆ ಆಹಾರ ಪೂರೈಕೆದಾರರ ಟೆಂಡರ್‌ ಆಹ್ವಾನಿಸುವುದಕ್ಕೆ ಸರ್ಕಾರ ಒಪ್ಪಿಗೆ ನೀಡಿದ್ದು, ಶೀಘ್ರವೇ ಬಿಬಿಎಂಪಿ ಟೆಂಡರ್‌ ಆಹ್ವಾನಿಸಲಿದೆ. ಜೊತೆಗೆ ಬೆಂಗಳೂರು ನಗರದಲ್ಲಿ 19 ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಗಳನ್ನು ದುರಸ್ತಿ ಪಡಿಸಲಾಗಿದೆ. ಮುಂದಿನ ವಾರದಲ್ಲಿ ಮೊಬೈಲ್‌ ಇಂದಿರಾ ಕ್ಯಾಂಟೀನ್‌ ಪುನರ್‌ ಆರಂಭಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Latest Indian news

Popular Stories