ಮುಂಬರುವ ವರ್ಷದಲ್ಲಿ ಗ್ರಾಮೀಣ ಭಾಗದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆ ಆರಂಭ – ಮಧು ಬಂಗಾರಪ್ಪ

ಬೆಂಗಳೂರು: ಮುಂಬರುವ ವರ್ಷದಲ್ಲಿ ಗ್ರಾಮೀಣ ಭಾಗದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳುವುದಾಗಿ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಸ್ಟಾರ್ ಫೌಂಡೇಷನ್ ಹಾಗೂ ಸೆಂಟರ್ ಫಾರ್ ಸ್ಪೋರ್ಟ್ಸ್ ಸೈನ್ಸ್ ಸಹಭಾಗಿತ್ವದಲ್ಲಿ ಆಡುಗೋಡಿಯ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಫುಟ್‌ಬಾಲ್ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಎಲ್ಲ ಮಕ್ಕಳು ಸರ್ಕಾರಿ ಶಾಲೆಯಲ್ಲಿ ಓದಬೇಕು ಎಂಬುದು ನಮ್ಮ ಸರ್ಕಾರದ ಆಶಯ.ಮಕ್ಕಳಿಗೆ ಶಿಕ್ಷಣದ ಜತೆಗೆ ಕ್ರೀಡಾ ಚಟುವಟಿಕೆಗಳಿಗೂ ಆದ್ಯತೆ ನೀಡಲಾಗುವುದು. ಮಾನಸಿಕವಾಗಿ, ದೈಹಿಕವಾಗಿ ಸದೃಢವಾಗಿರಲು ಕ್ರೀಡೆ ಸಹಕಾರಿ. ಗ್ರಾಮೀಣ ಭಾಗದಲ್ಲಿ ಕ್ರೀಡೆಗಳಿಗೆ ಉತ್ತೇಜನ ನೀಡಿದರೆ ಕ್ರೀಡಾ ಪ್ರತಿಭೆಗಳು ಹೊರ ಹೊಮ್ಮಲು ಸಾಧ್ಯವಾಗುತ್ತದೆ ಎಂದರು.

Latest Indian news

Popular Stories