ರಾಜ್ಯದಲ್ಲಿ ಅಕ್ರಮವಾಗಿ ಸ್ಥಾಪಿಸಿರುವ ‘ಮೊಬೈಲ್ ಟವರ್’ ಸಂಸ್ಥೆಗಳಿಗೆ ದಂಡ ವಿಧಿಸಿ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯಾದ್ಯಂತ ಅಕ್ರಮವಾಗಿ ಮೊಬೈಲ್ ಟವರ್ ಗಳನ್ನು ಸ್ಥಾಪಿಸಿರುವ ಸಂಸ್ಥೆಗಳಿಗೆ ದಂಡ ವಿಧಿಸಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕರ್ನಾಟಕ ಇನ್‌ಸ್ಟಾಲೇಶನ್ ಆಫ್ ನ್ಯೂ ಟೆಲಿಕಮ್ಯುನಿಕೇಶನ್ ಇನ್ಫ್ರಾಸ್ಟ್ರಕ್ಚರ್ ಟವರ್ಸ್ ನಿಯಮಾವಳಿ 2019 ರ ಪ್ರಕಾರ, ಬಿಬಿಎಂಪಿ ವ್ಯಾಪ್ತಿಯಲ್ಲಿ 1 ಲಕ್ಷ ರೂ.ವರೆಗೆ, ಇತರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 50,000 ರೂ, ನಗರ ಪುರಸಭೆ ವ್ಯಾಪ್ತಿಯಲ್ಲಿ ಮತ್ತು ಗ್ರಾಮ ಪಂಚಾಯ್ತಿ ಮಿತಿಗಳಲ್ಲಿ 35,000 ರೂ. ಇನ್​ಸ್ಟಾಲೇಶನ್ ಚಾರ್ಜಸ್ ವಿಧಿಸಬಹುದಾಗಿದೆ.

ಅಕ್ರಮವಾಗಿ ಟವರ್‌ಗಳನ್ನು ಅಳವಡಿಸಿರುವ ಟೆಲಿಕಾಂ ಸೇವಾ ಪೂರೈಕೆದಾರರಿಗೆ ರಾಜ್ಯ ಸರ್ಕಾರ ದಂಡ ವಿಧಿಸಬೇಕು ಎಂದು ಕಾಂಗ್ರೆಸ್ ಮಾಜಿ ಶಾಸಕ ರಮೇಶ್ ಬಾಬು ಮನವಿ ಸಲ್ಲಿಸಿದ್ದರು. ಅದನ್ನು ಪರಿಗಣಿಸಿ ಸಿದ್ದರಾಮಯ್ಯ ಈ ನಿರ್ದೇಶನ ನೀಡಿದ್ದಾರೆ. ಈ ಮೂಲಕ ರಾಜ್ಯವು 7,000 ಕೋಟಿ ರೂಪಾಯಿಗಳನ್ನು ಸಂಗ್ರಹಿಸಬಹುದು ಎಂದು ಅವರು ಹೇಳಿದ್ದಾರೆ.

ಇದರಿಂದ ರಾಜ್ಯದ ಬೊಕ್ಕಸಕ್ಕೆ ದೊಡ್ಡ ನಷ್ಟವಾಗಿದೆ ಎಂದು ಸಿಎಂಗೆ ಸಲ್ಲಿಸಿದ್ದ ಮನವಿ ಪತ್ರದಲ್ಲಿ ರಮೇಶ್ ಉಲ್ಲೇಖಿಸಿದ್ದರು. ಅಳವಡಿಕೆ ಶುಲ್ಕವನ್ನು ಇತರೆ ತೆರಿಗೆಯೊಂದಿಗೆ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದರು.

Latest Indian news

Popular Stories