ಕ್ರಿಸ್‍ಮಸ್ ಪ್ರಯುಕ್ತ KSRTCಯಿಂದ 1000 ಹೆಚ್ಚುವರಿ ಬಸ್ಸುಗಳ ಸೇವೆ

ಬೆಂಗಳೂರು ಡಿ. 20- ವಾರಾಂತ್ಯದ ರಜೆ ಹಾಗೂ ಕ್ರಿಸ್‍ಮಸ್ ಹಬ್ಬದ ರಜೆಯ ಹಿನ್ನೆಲೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಒಂದು ಸಾವಿರ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಲಿದೆ. ಡಿ.23ರ ನಾಲ್ಕನೇ ಶನಿವಾರ, ಡಿ.24ರ ಭಾನುವಾರ ಹಾಗೂ ಡಿ.25ರಂದು ಕ್ರಿಸ್‍ಮಸ್ ಹಬ್ಬದ ರಜೆ ಇದೆ.

ಈ ಮೂರು ದಿನಗಳಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುವುದರಿಂದ ಡಿ.22ರಿಂದ ಡಿ.24ರವರೆಗೆ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವುದಾಗಿ ಕೆಎಸ್‌ಆರ್‌ಟಿಸಿ ಪ್ರಕಟಣೆ ತಿಳಿಸಿದೆ.
ಬೆಂಗಳೂರಿನಿಂದ 1000 ಹೆಚ್ಚುವರಿ ಬಸ್‍ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ರಾಜ್ಯದ ಪ್ರಮುಖ ಸ್ಥಳಗಳು ಹಾಗೂ ಅಂತರರಾಜ್ಯದ ವಿವಿಧ ಸ್ಥಳಗಳಿಗೆ ಕಲ್ಪಿಸಿದೆ.

ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗುತ್ತದೆ.

Latest Indian news

Popular Stories