ರಾಜ್ಯದಲ್ಲಿಂದು 74 ಜನರಿಗೆ ಕೊರೋನಾ: ಇಬ್ಬರು ಮೃತ್ಯು

ಬೆಂಗಳೂರು: ರಾಜ್ಯದಲ್ಲಿ ಇಂದು 74 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಬೆಂಗಳೂರಿನಲ್ಲಿ 57 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

ಹಾಸನ 4, ಬೆಂಗಳೂರು ಗ್ರಾಮಾಂತರ 4, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ತಲಾ 2, ವಿಜಯನಗರ, ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಂದು ಕೇಸ್ ಪತ್ತೆಯಾಗಿದೆ.

ರಾಜ್ಯದಲ್ಲಿ 464 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.15 ರಷ್ಟು ಇದೆ. 44 ಮಂದಿ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 376 ಸಕ್ರಿಯ ಪ್ರಕರಣಗಳಿವೆ. ದಕ್ಷಿಣ ಕನ್ನಡ, ಮೈಸೂರು ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Latest Indian news

Popular Stories