ಕೊರೊನಾ ಸೋಂಕು ದಿನೇ ದಿನೇ ಹೆಚ್ಚಳ; ಕ್ರಿಸ್ ಮಸ್, ನ್ಯೂ ಇಯರ್ ಗೆ ಕಟ್ಟುನಿಟ್ಟಿನ ಕ್ರಮ ಸಾಧ್ಯತೆ

ಬೆಂಗಳೂರು : ಕೇರಳದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ರಾಜ್ಯದಲ್ಲಿಯೂ ಕಟ್ಟೆಚ್ಚರ ಕೈಗೊಳ್ಳಲಾಗುತ್ತಿದೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ.

ಕೇಂದ್ರ ಸರ್ಕಾರ ರಾಜ್ಯಗಳಿಗೆ ಮಾರ್ಗಸೂಚಿ ನೀಡಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಡಿ ಹೆಚ್ ಒ ಗಳೊಂದಿಗೆ ಸಭೆ ನಡೆಯಲಿದ್ದು, ಸಭೆಯಲ್ಲಿ ಕೋವಿಡ್ ಹರಡದಂತೆ ರಾಜ್ಯದಲ್ಲಿ ಕೈಗೊಳ್ಳುವ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ.ಈ ಹಿನ್ನೆಲೆಯಲ್ಲಿ ಕ್ರಿಸ್ ಮಸ್ ಹಾಗೂ ನ್ಯೂ ಇಯರ್ ಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Latest Indian news

Popular Stories