9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಬೆಂಗಳೂರು: 9 ತಿಂಗಳು ಮೇಲ್ಪಟ್ಟ ಎಲ್ಲ ಮಕ್ಕಳಿಗೆ ಹೆಲ್ಮೆಟ್ ಹಾಗೂ ಮಕ್ಕಳ ಸುರಕ್ಷತಾ ಕ್ರಮಗಳ ಕುರಿತಂತೆ ನಿರ್ದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

ಮಕ್ಕಳಿಗೆ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳು ಲಭ್ಯವಾಗುವಂತೆ ಮಾಡಲು ತುರ್ತು ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌ ನೀಡಿದೆ.

ಮಕ್ಕಳ ಹೆಲ್ಮೆಟ್‌ ಹಾಗೂ ಸುರಕ್ಷತಾ ಸಾಧನಗಳ ಕುರಿತು ಡಾ.ಕೆ. ಅರ್ಚನಾಭಟ್‌ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

Latest Indian news

Popular Stories