
OPS ಬಗ್ಗೆ ಜ. 5ರಂದು ಮಹತ್ವದ ಘೋಷಣೆ – ಸಿದ್ದರಾಮಯ್ಯ
ಬೆಂಗಳೂರು ಜನವರಿ 02: ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮುಂದೆ ರಾಜ್ಯದ ಸರ್ಕಾರಿ ನೌಕರರು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (OPS) ಪುನಃ ಜಾರಿಗೆ ತರಬೇಕು ಎಂದು ಬೇಡಿಕೆ ಇಟ್ಟಿದ್ದಾರೆ.
ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರಿ ನೌಕರರ ಬೇಡಿಕೆಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಹಳೆ ಪಿಂಚಣಿ ಯೋಜನೆಯ ಪುನಃ ಜಾರಿ ಕುರಿತು ಚರ್ಚೆ ನಡೆಸಲು ಬೆಂಗಳೂರಿನಲ್ಲಿ ಜನವರಿ 5ರಂದು ಸಭೆಯನ್ನು ಕರೆದಿದ್ದಾರೆ.
ಶುಕ್ರವಾರ ಸಂಜೆ 5 ಗಂಟೆಗೆ ಹಣಕಾಸು ಇಲಾಖೆ ಅಧಿಕಾರಿಗಳು, ಎನ್ಪಿಎಸ್ ನೌಕರರ ಸಂಘದ ಪದಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಸಭೆಯನ್ನು ನಡೆಸಲಿದ್ದಾರೆ. ಈ ಸಭೆಯ ಬಳಿಕ ಕರ್ನಾಟಕ ಸರ್ಕಾರ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸುವ ಸಂಬಂಧ ಮಹತ್ವದ ತೀರ್ಮಾನವನ್ನು ಪ್ರಕಟಿಸಲಿದೆಯೇ? ಎಂದು ಕಾದು ನೋಡಬೇಕಿದೆ.
ಅಧ್ಯಕ್ಷರ ಹೇಳಿಕೆ; ರಾಜ್ಯ ಸರ್ಕಾರಿ ಎನ್ಪಿಎಸ್ ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ ತೇಜ ಈ ಕುರಿತು ಮಾತನಾಡಿದ್ದಾರೆ. “ಕಳೆದ 10 ವರ್ಷಗಳಿಂದ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಲು ನಿರಂತರವಾಗಿ ಹೋರಾಟವನ್ನು ಮಾಡಲಾಗುತ್ತಿದೆ. ಜನವರಿ 5ರಂದು ಮುಖ್ಯಮಂತ್ರಿಗಳ ಜೊತೆ ನಡೆಯುವ ಸಭೆಯ ಬಳಿಕ ಫಲಿತಾಂಶ ಹೊರ ಬೀಳಲಿದೆ” ಎಂದು ಹೇಳಿದ್ದಾರೆ. “ಜನವರಿ 5ರ ಶುಕ್ರವಾರ ಮುಖ್ಯಮಂತ್ರಿಗಳು ಎನ್ಪಿಎಸ್ ನೌಕರರು ಹಾಗೂ ಸಮಾನ ಮನಸ್ಕ ಸಂಘಟನೆಗಳೊಂದಿಗೆ ಸಭೆಯನ್ನು ನಡೆಸಲಿದ್ದಾರೆ




