45,45,749 ವಿದ್ಯಾರ್ಥಿಗಳಿಗೆ ಉಚಿತವಾಗಿ 2 ಜೊತೆ ಸಮವಸ್ತ್ರ, ಶೂ-ಸಾಕ್ಸ್ ವಿತರಣೆ – ಸಿದ್ದರಾಮಯ್ಯ

ಬೆಂಗಳೂರು: 45,45,749 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ 2 ಜೊತೆ ಸಮವಸ್ತ್ರ ಮತ್ತು ಶೂ-ಸಾಕ್ಸ್ಗಳನ್ನು ವಿತರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಂದ ಬರುವ ವಿದ್ಯಾರ್ಥಿಗಳು ಕೂಡ ಇತರೆ ಮಕ್ಕಳಂತೆ ಶೂ ಧರಿಸಿಕೊಂಡು ಶಾಲೆಗೆ ಬರಬೇಕು, ಮಕ್ಕಳಲ್ಲಿ ಸಮಾನತೆಯ ಭಾವನೆ ಬೆಳೆದು ಶೈಕ್ಷಣಿಕ ಸಾಧನೆಗಳ ಕಡೆಗೆ ಹೆಚ್ಚು ಗಮನ ಹರಿಸುವಂತಾಗಬೇಕು ಎಂಬುದು ನಮ್ಮ ಆಶಯ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದರು.

55,43,828 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿಯಲ್ಲಿ ಉಚಿತವಾಗಿ 4,47,17,051 ಪಠ್ಯಪುಸ್ತಕಗಳನ್ನು ವಿತರಿಸಲಾಗಿದೆ.ರಾಜ್ಯದ ಪ್ರತಿ ವಿದ್ಯಾರ್ಥಿಗೆ ಗುಣಮಟ್ಟದ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ನಾವು ಬದ್ಧರಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು

Latest Indian news

Popular Stories