ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎರಡೂವರೆ ವರ್ಷದ ಮಗು ರೋಹನ್, ತಂದೆ ಸಂದೇಶ್(30) ಸಾವನ್ನಪ್ಪಿದ್ದಾರೆ.ಉಳಿದ ಮೂವರು ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಡಿ.19 ರಂದು ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯ ಗಾರ್ವೆಬಾವಿ ಪಾಳ್ಯದ ಲಕ್ಷ್ಮಿ ಲೇಔಟ್ ನಲ್ಲಿ ಘಟನೆ ನಡೆದಿತ್ತು. ಸುಬ್ರಮಣಿ ಎಂಬುವರಿಗೆ ಸೇರಿದ ಕಟ್ಟಡದಲ್ಲಿ ಸಿಲಿಂಡರ್ ಸ್ಪೋಟಗೊಂಡು ಐವರು ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು