ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು – ಬಿ. ಎಸ್. ಯಡಿಯೂರಪ್ಪ

ಬೆಳಗಾವಿ (ಡಿ.14): ಇತ್ತೀಚೆಗೆ ಮೂರು ರಾಜ್ಯಗಳಲ್ಲಿ ಬಿಜೆಪಿ ವಿಜಯಶಾಲಿಯಾಗಿರುವ ಹಿನ್ನೆಲೆಯಲ್ಲಿ ಸಭೆಯಲ್ಲಿ ಶಾಸಕರು ಪ್ರಧಾನಿ ನರೇಂದ್ರ ಮೋದಿ ಪರ ಘೋಷಣೆ ಕೂಗಿದರು.

ನಂತರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಏನೇ ಇದ್ದರೂ ಪಕ್ಷದ ವೇದಿಕೆಯಲ್ಲಿ ಮಾತನಾಡಬೇಕು. ಪಕ್ಷಕ್ಕೆ ಒಳ್ಳೆಯದಾಗುವುದಿದ್ದರೆ ಮಾಧ್ಯಮಗಳ ಜೊತೆ ಮಾತಾಡಿ, ಇಲ್ಲ ಅಂದರೆ ಏನು ಮಾತಾಡಬೇಡಿ. ನಾವೆಲ್ಲರೂ ಸೇರಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಿ ಮಾಡಬೇಕು ಎಂದು ತಮ್ಮ ಅಭಿಪ್ರಾಯ ತಿಳಿಸಿದರು.

ಮುಸ್ಲಿಂ ಸಮಾಜಕ್ಕೆ ₹10 ಸಾವಿರ ಕೋಟಿ ಕೊಡುವವರು ರೈತರಿಗೆ ಯಾಕೆ ಹಣ ಕೊಡಲ್ಲ ಎಂಬುದರ ಬಗ್ಗೆ ಪ್ರಶ್ನೆ ಮಾಡಬೇಕು. ಸಣ್ಣ ಪುಟ್ಟ ವ್ಯತ್ಯಾಸ ಸರಿಪಡಿಸಿಕೊಂಡು ಸದನದಲ್ಲಿ ಒಗ್ಗಟ್ಟಾಗಿ ಹೋರಾಟ ಮಾಡಬೇಕು ಎಂದು ಪಕ್ಷದ ಶಾಸಕರಿಗೆ ಸೂಚಿಸಿದರು.

ಪಕ್ಷದ ಸಿಎಲ್‌ಪಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನ ಪರಿಷತ್‌ ಸದಸ್ಯ ಎನ್‌.ರವಿಕುಮಾರ, ಆರ್ಟಿಕಲ್ 370ನೇ ವಿಧಿ ರದ್ದು ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ಧಾರವನ್ನು ಸ್ವಾಗತಿಸಿದ್ದೇವೆ.ಅಧಿವೇಶನ ಮುಗಿದ ಬಳಿಕ ಎಲ್ಲ ಶಾಸಕರು ಕೆಲಸ ಮಾಡಲು ಸೂಚನೆ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಸೇರಿ ಕಾಂಗ್ರೆಸ್ ವಿರುದ್ದ ಸಂಘಟಿತ ವಾಗಿ ಹೋರಾಡಲು ತೀರ್ಮಾನಿಸಲಾಗಿದೆ ಎಂದರು.

Latest Indian news

Popular Stories