
Bengaluru Urban
ರಾಜ್ಯದಲ್ಲಿ ನಿನ್ನೆ ಒಂದೇ ದಿನ 193 ಕೋಟಿ ಮೌಲ್ಯದ ‘ಮದ್ಯ’ ಮಾರಾಟ
ಬೆಂಗಳೂರು: ರಾಜ್ಯದಲ್ಲಿ ಹೊಸ ವರ್ಷದ ಪಾರ್ಟಿಗೆ 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದ್ದು, ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ.
2023ರ ಕೊನೆಯ ದಿನವಾದ ನಿನ್ನೆ ಭಾನುವಾರದಿಂದು 193 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಈ ಮೂಲಕ ಒಂದೇ ದಿನ ಭರ್ಜರಿ ಲಿಕ್ಕರ್ ಮಾರಾಟ ಆಗಿದೆ.
ಡಿಸೆಂಬರ್ ತಿಂಗಳಲ್ಲಿ ಇಂಡಿಯನ್ ಮೇಡ್ ಲಿಕ್ಕರ್ 3,07,953 ಬಾಕ್ಸ್, ಬಿಯರ್ 1,95,005 ಬಾಕ್ಸ್ ಮಾರಾಟವಾಗಿದೆ. ಈ ವರ್ಷದಲ್ಲಿ ಮದ್ಯ ಮಾರಾಟದಿಂದ ಸರ್ಕಾರದ ಬೊಕ್ಕಸಕ್ಕೆ ಹೆಚ್ಚು ಆದಾಯ ಹರಿದುಬಂದಿದೆ.ರಾಜ್ಯದ ಜನರು ಬಹಳ ಸಂಭ್ರಮದಿಂದ ಹೊಸ ವರ್ಷವನ್ನು ವೆಲ್ ಕಮ್ ಮಾಡಿದ್ದಾರೆ. ಬೆಂಗಳೂರಿನಲ್ಲಂತೂ ‘ಎಣ್ಣೆಯ ಮತ್ತೇ ಗಮ್ಮತ್ತು’ ಎಂಬಂತೆ ನಾರಿಯರು, ಯುವಕರು ಎಣ್ಣೆಯಲ್ಲಿ ಮಿಂದೆದಿದ್ದಾರೆ.




