Bengaluru UrbanFeatured Story

ಹಿಜಾಬ್ ನಿಷೇಧ ಆದೇಶ ವಾಪಾಸ್ ಸಿದ್ದರಾಮಯ್ಯ ಹೇಳಿಕೆಗೆ – ಆರ್. ಅಶೋಕ್ ಆಕ್ರೋಶ

ಬೆಂಗಳೂರು: ಹಿಜಾಬ್ ನಿಷೇಧ ಆದೇಶ ವಾಪಾಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಪಕ್ಷ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ

ಹಿಜಾಬ್ ನಿಷೇಧ ಆದೇಶ ಹಿಂಪಡೆಯುವುದಾಗಿ ಸಿಎಂ ಸಿದ್ದರಾಮಯ್ಯ ಹೇಳುತ್ತಿರುವುದರ ಹಿಂದೆ ದೊಡ್ಡ ಷಡ್ಯಂತ್ರ ಅಡಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಗ್ಯಾರಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪುಹಾಕದ ಹೈಕಮಾಂಡ್ ಇವೆಲ್ಲದರ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಸಿಎಂ ಸಿದ್ದರಾಮಯ್ಯ ಹಿಜಾಬ್ ವಿಷಯ ಪ್ರಸ್ತಾಪಿಸಿ ರಾಜ್ಯದ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button