ಬಸ್ ಗಳಲ್ಲಿ ಮಾಸ್ಕ್ ಧರಿಸಿ ಪ್ರಯಾಣಿಸಿ; ಸಚಿವ ರಾಮಲಿಂಗಾ ರೆಡ್ಡಿ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಬಸ್ ಗಳಲ್ಲಿ ಮಾಸ್ಕ್ ಧರಿಸಿ ಪ್ರಯಾಣಿಸುವಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಕೋವಿಡ್ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪ್ರತಿಯೊಬ್ಬ ಪ್ರಯಾಣಿಕರು ಮಾಸ್ಕ್ ಧರಿಸಿ ಪ್ರಯಾಣಿಸಿ ಎಂದು ಸಲಹೆ ನೀಡಿದ್ದಾರೆ.

ಸರ್ಕಾರದ ಆದೇಶವನ್ನು ನಾವು ಕಟ್ಟುನಿಟ್ಟಾಗಿ ಪಾಲಿಸುತ್ತೇವೆ. ಕೇಂದ್ರ ಆರೋಗ್ಯ ಸಚಿವರ ಜೊತೆ ದಿನೇಶ್ ಗುಂಡೂರಾವ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಚಿವರು ಸಲಹೆ ಪಡೆದಿದ್ದಾರೆ. ಅದರಂತೆ ಮುಜರಾಯಿ ಇಲಾಖೆ, ಸಾರಿಗೆ ನಿಗಮಗಳಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ನೆರೆ ರಾಜ್ಯ ಕೇರಳದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಕೇರಳದಿಂದ ಬರುವ ಹಾಗೂ ಹೋಗುವ ಬಸ್ ಗಳಿಗೆ ಮುನ್ನೆಚ್ಚರಿಕೆ ಕ್ರಮವಾಗಿ ಸ್ಯಾನಿಟೈಸರ್ ಸಿಂಪಡ್ಡಿಸುವಂತೆ ಸೂಚಿಸಲಾಗಿದೆ ಎಂದು ಹೇಳಿದರು.

Latest Indian news

Popular Stories