ಹೆಚ್ಚುತ್ತಿರುವ ಚಳಿ ಮಧ್ಯೆ 4 ದಿನ ಈ ಜಿಲ್ಲೆಗಳಿಗೆ ಉತ್ತಮ ಮಳೆ

ಬೆಂಗಳೂರು:ಜನವರಿ ಮೊದಲ ವಾರದ ನಾಲ್ಕು ದಿನ ಉತ್ತಮ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಕರಾವಳಿಗಿಂತಲೂ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಇಳಿಕೆ ಆಗಿ, ಅತೀವ ಚಳಿ ದಾಖಲಾಗಿತ್ತು. ಇದೀಗ ಚಳಿ ಜೊತೆಗೆ ಜನವರಿ 1ರಿಂದ 4ರವರಗೆ ಹಗುರದಿಂದ ಸಾಧಾರಣವಾಗಿ ಮಳೆ ಆಗಲಿದೆ.

ಬೆಳಗ್ಗೆ ದಟ್ಟ ಮಂಜು ಆವರಿಸಲಿದೆ. ಕೆಲವು ಜಿಲ್ಲೆಗಳಲ್ಲಿ ಮಬ್ಬು ವಾತಾವರಣ ಕಂಡು ಬರಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಾಲ್ಕು ದಿನ ಹಗುರದಿಂದ ವ್ಯಾಪಕ ಮಳೆ ಸಾಧ್ಯತೆ ಇದೆ. ಇದೇ ಅವಧಿಯಲ್ಲಿ ಚಾಮರಾಜನಗರ, ಚಿಕ್ಕಮಳೂರು, ದಾವಣಗೆರೆ, ಕೊಡಗು, ಹಾಸನ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ದಿನ ಬಿಟ್ಟು ದಿನ ಹಗುರದಿಂದ ಸಾಧಾರಣ ಮಳೆ ಸಂಭವವಿದೆ.

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಎಲ್ಲಿಯೂ ಮಳೆ ಆಗಿಲ್ಲ. ರಾಜ್ಯದ ಕನಿಷ್ಠ ತಾಪಮಾನ ವಿಜಯಪುರದಲ್ಲಿ 10.5 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ತಾಪಮಾನ ದಾಖಲಾಗಿದೆ. ಉಳಿದಂತೆ ಧಾರವಾಡದಲ್ಲಿ 11,4 ಡಿಸೆ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಯಲ್ಲಿ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಾರವಾರ-ಹೊನ್ನಾರದಲ್ಲಿ ರಾಜ್ಯದ ಗರಿಷ್ಠ ತಾಪಮಾನ ಉಳಿದಂತೆ ರಾಜ್ಯದ ಗರಿಷ್ಠ ತಾಪಮಾನ ಹೊನ್ನಾವರ ಮತ್ತು ಕಾರವಾರದಲ್ಲಿ ತಲಾ 36 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Latest Indian news

Popular Stories