Bengaluru UrbanFeatured Story

ಕಾಂಗ್ರೆಸ್‌ನವರು ನಿಜವಾದ ಹಿಂದೂಗಳು- ಸಚಿವ ರಾಮಲಿಂಗಾರೆಡ್ಡಿ

ಹುಬ್ಬಳ್ಳಿ : ಬಿಜೆಪಿಯವರು ಚುನಾವಣೆಗಾಗಿ ಶ್ರೀ ರಾಮನನ್ನು ಬಳಸಿಕೊಳ್ಳುತ್ತಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನವರು ನಿಜವಾದ ಹಿಂದೂಗಳು. ನಾವು ಯಾವತ್ತೂ ಕೂಡ‌ ರಾಜಕಾರಣಕ್ಕೆ ಹಿಂದುತ್ವ ಮತ್ತು ಶ್ರೀರಾಮನನ್ನು ತೆಗೆದುಕೊಂಡು ಬಂದಿಲ್ಲ. ದೇಶದಲ್ಲಿ ಲಕ್ಷಾಂತರ ರಾಮನ ದೇವಸ್ಥಾನಗಳಿವೆ. ಬಿಜೆಪಿಯವರು ಮತಕ್ಕಾಗಿ ಶ್ರೀರಾಮನನ್ನು ನೆನಪು ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.ಹೀಗಾಗಿ ಧರ್ಮವನ್ನು ತರುತ್ತಾರೆ. ಶ್ರೀ ರಾಮನನ್ನು ತರುತ್ತಾರೆ. ಗಣಿ ಕಲ್ಲಿದ್ದಲು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಈ ವಿಚಾರದಲ್ಲಿ ಗಿಮಿಕ್ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬಿಜೆಪಿಯವರು ರಾಜಕಾರಣಕ್ಕಾಗಿ ಏನು ಬೇಕಾದರೂ ಮಾಡುತ್ತಾರೆ. ಅದಕ್ಕೆ ನಾವು ತಲೆ ಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಬಿಜೆಪಿಯವರು ಪುಕ್ಸಟ್ಟೆಯಾಗಿ ಅಧಿಕಾರಕ್ಕೆ ಬಂದವರು, ಪುಕ್ಸಟ್ಟೆಯಾಗಿ ಏನೂ ಕೊಡಲಿಲ್ಲ. ಬಿಜೆಪಿಯವರು ಕೆಲಸ ಮಾಡಲ್ಲ, ಕೆಲಸ ಮಾಡುವವರಿಗೂ ಬಿಡಲ್ಲ.ಬಿಜೆಪಿಯವರ ಮಾತಿಗೆ ಕಿಮ್ಮತ್ತಿಲ್ಲ ಎಂದು ಲೇವಡಿ ಮಾಡಿದರು.

ಶಕ್ತಿ ಯೋಜನೆ ಆರಂಭಗೊಂಡಾಗ 84 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಈಗ 1ಕೋಟಿ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿರುತ್ತಾರೆ. ಶಕ್ತಿ ‌ಯೋಜನೆಯಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ. ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ 884 ಹೊಸ ಬಸ್ ಖರೀದಿಸಲಾಗುವುದು. ಈಗಾಗಲೇ 375 ಬಸ್‌ಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button