Bengaluru UrbanFeatured Story

ಬಿಜೆಪಿ ಯವರು ಸುಳ್ಳು ಹೇಳುವುದನ್ನು ಬಿಟ್ಟು ಬೇರೇನು ಮಾಡುತ್ತಾರೆ ಸಿದ್ದರಾಮಯ್ಯ ಪ್ರಶ್ನೆ??

ಬೆಂಗಳೂರು: ಬಿಜೆಪಿಯವರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಈ ಬಗ್ಗೆ ಸುದ್ದಿ ಗೋಷ್ಠಿ ನಡೆಸಿದ ಸಿದ್ದರಾಮಯ್ಯ ಅವರು,ಅನೇಕ ಧರ್ಮ, ಜಾತಿ, ಭಾಷೆ, ಸಂಸ್ಕೃತಿಗಳಿವೆ. 143 ಕೋಟಿ ಜನ ಸಂಖ್ಯೆ ಇದೆ. ಎಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು. ‘ಸಬ್ ಕಾ ಸಾಥ್…’ ಎಂದು ಒಟ್ಟಿಗೆ ತೆಗೆದುಕೊಂಡು ಹೋಗಬೇಕು, ‘ಸಬ್‌ಕಾ ವಿಕಾಸ…’ ಆಗಬೇಕಲ್ಲವೇ? ಹಿಂದು, ಮುಸ್ಲಿಂ, ಕ್ರೈಸ್ತ, ಬೌದ್ಧ, ಪಾರ್ಸಿ, ಯಹೂದಿಗಳೆಲ್ಲರನ್ನೂ ಒಟ್ಟಿಗೆ ತೆಗೆದುಕೊಂಡು ಹೋಗಬೇಕು, ಎಲ್ಲರೂ ಮಾನವರು. ಇದರಲ್ಲಿ ನಂಬಿಕೆ ಇಟ್ಟುಕೊಂಡಿದ್ದು ಕಾಂಗ್ರೆಸ್ ಎಂದರು.

ದೇಶದಲ್ಲಿ ಬದಲಾವಣೆ ತರಬೇಕು, ಸಮ ಸಮಾಜ ನಿರ್ಮಾಣ ಆಗಬೇಕು. ಜಾತಿ, ವರ್ಗ ವ್ಯವಸ್ಥೆ ಹೋಗಬೇಕು. ಅದು ಕಾಂಗ್ರೆಸ್ ಗುರಿ, ಅದರಲ್ಲಿ ಬಿಜೆಪಿಗೆ ನಂಬಿಕೆ ಇಲ್ಲ. ನಂಬಿಕೆ ಇರುವುದು ಕಾಂಗ್ರೆಸ್‌ಗೆ ಮಾತ್ರ ಎಂದು ಹೇಳಿದರು.

ಬಿಜೆಪಿಯವರು ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರಿಗೆ ಮೀಸಲಾತಿ ತರುತ್ತೇವೆಂದು ಹೊರಟರು. ಈ ವರ್ಷವೇ ಜಾರಿಗೆ ಕೊಡಬಹುದಿತ್ತು, ಏಕೆ ಮಾಡಲಿಲ್ಲ? ಏಕೆಂದರೆ ಅವರಿಗೆ ಸಾಮಾಜಿಕ ನ್ಯಾಯದಲ್ಲಿ ಬದ್ಧತೆ ಇಲ್ಲ. ಬದ್ಧತೆ ಇರುವುದು ಕಾಂಗ್ರೆಸ್‌ಗೆ ಮಾತ್ರ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಕೊಡುತ್ತೇವೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button