Bengaluru Urban

ರಾಜ್ಯದಲ್ಲಿ ಕ್ರಿಮಿನಲ್ ಕೃತ್ಯಗಳು ಹೆಚ್ಚಾಗಲು ಬಿಜೆಪಿಯ ಕಾನೂನು ವಿರೋಧಿ ನಡವಳಿಕೆಗಳೇ ಕಾರಣ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಾಲ್ಕು ವರೆ ವರ್ಷಗಳ ಕಾಲ ದುರಾಡಳಿತ ಮತ್ತು ಭ್ರಷ್ಟಾಚಾರದ ಹಗರಣಗಳಲ್ಲಿಯೇ ಕಾಲ ಕಳೆದಿದ್ದ ಭಾರತೀಯ ಜನತಾ ಪಕ್ಷಕ್ಕೆ ನಮ್ಮ ಸರ್ಕಾರದ ಸಾಧನೆಗಳಿಗೆ ವ್ಯಕ್ತವಾಗುತ್ತಿರುವ ಜನಸ್ಪಂದನ ದಿಗಿಲು ಹುಟ್ಟಿಸಿದೆ. ಇದಕ್ಕಾಗಿ ಹುಬ್ಬಳ್ಳಿಯ ಕ್ರಿಮಿನಲ್ ಆರೋಪಿಯೊಬ್ಬನ ಬಂಧನದ ಎಳೆ ಹಿಡಿದುಕೊಂಡು ನೇತಾಡುತ್ತಿದ್ದಾರೆ.

ಅಪರಾಧಿಗಳಿಗೆ ಜಾತಿ,ಧರ್ಮಗಳ ಬಣ್ಣ ಹಚ್ಚುವುದು ಅತ್ಯಂತ ಅಪಾಯಕಾರಿ ಎನ್ನುವುದನ್ನು ಬಿಜೆಪಿ ನಾಯಕರು ಅರ್ಥಮಾಡಿಕೊಳ್ಳಬೇಕು ಅಂತ ಸಿಎಂ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿರುವ ಪತ್ರಿಕಾ ಹೇಳಿಕೆಯಲ್ಲಿ ಉಲ್ಲೇಖ ಮಾಡಿದ್ದಾರೆ.

ರಾಜ್ಯದ ಬಿಜೆಪಿಯ ಸ್ಥಿತಿ ಒಂದು ಮನೆ ನೂರು ಬಾಗಿಲು ಎಂಬಂತಾಗಿದೆ. ಆ ಪಕ್ಷದ ರಾಜ್ಯಾಧ್ಯಕ್ಷರನ್ನು ಅದೇ ಪಕ್ಷದ ಹಿರಿಯ ನಾಯಕರು ಈಗಲೂ ಒಪ್ಪಿಕೊಂಡಿಲ್ಲ, ವಿರೋಧ ಪಕ್ಷದ ನಾಯಕರ ಮಾತಿಗೆ ಸದನದಲ್ಲಿಯೇ ಸದಸ್ಯರು ಬಿಡಿಗಾಸಿನ ಕಿಮ್ಮತ್ತು ಕೊಟ್ಟಿಲ್ಲ. ಯಡಿಯೂರಪ್ಪ ಮತ್ತು ಮಕ್ಕಳ ವಿರುದ್ದ ದಿನಕ್ಕೊಂದು ಗಂಭೀರ ಸ್ವರೂಪದ ಆರೋಪ ಮಾಡುತ್ತಿರುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರಿಗೆ ಕನಿಷ್ಠ ಒಂದು ಎಚ್ಚರಿಕೆಯ ನೋಟೀಸ್ ನೀಡಲಾಗದಷ್ಟು ಪಕ್ಷ ನಿರ್ವಿರ್ಯವಾಗಿದೆ.

ರಾಜ್ಯದ ಬಿಜೆಪಿ ನಾಯಕರಲ್ಲಿ ಈಗಲೂ ನಾನು ವಿನಂತಿ ಮಾಡುತ್ತಿದ್ದೇನೆ. ದೇವರು-ಧರ್ಮದ ಹೆಸರಲ್ಲಿ ಕ್ಷುಲಕ ರಾಜಕೀಯ ಮಾಡುವುದನ್ನು ಕೈಬಿಟ್ಟು ಜವಾಬ್ದಾರಿಯುತವಾದ ವಿರೋಧಪಕ್ಷವಾಗಿ ಕಾರ್ಯನಿರ್ವಹಿಸುವ ಪ್ರಯತ್ನ ಮಾಡಿ. ದೇಶವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಎಂದು ಹೇಳುತ್ತಿರುವ ಬಿಜೆಪಿ ರೀತಿಯಲ್ಲಿ ನಾವು ರಾಜ್ಯವನ್ನು ಬಿಜೆಪಿ ಮುಕ್ತ ಮಾಡುತ್ತೇವೆ ಎಂಬ ಸೊಕ್ಕಿನ ಹೇಳಿಕೆಗಳನ್ನು ನೀಡುವುದಿಲ್ಲ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button