ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಷೆ ‘ಕ್ರಿಶ್ಚಿಯನ್ ಸಮುದಾಯ’ದ ಕೊಡುಗೆ ಅತ್ಯುತ್ತಮ -ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಾಮಾಜಿಕ ಅಸಮಾನತೆಯಿರುವ ಕಾಲಮಾನದಲ್ಲಿ ಕ್ರಿಶ್ಚಿಯನ್ ಸಮುದಾಯ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿನ ಸೇವೆ ಶ್ಲಾಘನೀಯವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಲೀನಿಯರ್ ಆಕ್ಸರಲೇಟರ್ ರೆಡಿಯಷನ್ ಥೆರಪಿ ಸೇವೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಕ್ರಿಶ್ಚಿಯನ್ ಸಮುದಾಯ ಅತ್ಯುತ್ತಮ ಕೆಲಸವನ್ನು ಮಾಡಿದೆ.
ಉಡುಪಿ ಹಾಗೂ ಮಂಗಳೂರಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಈ ಸಮುದಾಯ ಒಳ್ಳೆಯ ಬುನಾದಿಯನ್ನು ಹಾಕಿದೆ. ಭಾರತೀಯ ಸಮಾಜದಲ್ಲಿ ಬಹುಸಂಖ್ಯಾತ ಜನ ಅಕ್ಷರಸಂಸ್ಕೃತಿಯಿಂದ ವಂಚಿತರಾಗಿದ್ದರು.

ಶ್ರೀಮಂತರು ಉತ್ತಮ ಹಾಗೂ ದುಬಾರಿ ಖಾಸಗಿ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ದಿನನಿತ್ಯಜೀವನದಕ್ಕಾಗಿ ಹೋರಾಡುವ ಬಡಜನರಿಗೆ ಕಡಿಮೆ ದರದಲ್ಲಿ ಆರೋಗ್ಯ ಸೇವೆ ನೀಡುವ ಬ್ಯಾಪ್ಟಿಸ್ಟ್ ಆಸ್ಪತ್ರೆ ಜನಸೇವೆಯಲ್ಲಿ ನಂಬಿಕೆ ಇರಿಸಿದೆ.ಬ್ಯಾಪ್ಟಿಸ್ಟ್ ಆಸ್ಪತ್ರೆಯು ಬಡವರಿಗೆ ಕೈಗೆಟಕುವ ದರದಲ್ಲಿ ಚಿಕಿತ್ಸೆ ನೀಡುತ್ತಾ ಬಂದಿದೆ. ಸರ್ಕಾರಿ ಆಸ್ಪತ್ರೆಯಂತೆ ಬ್ಯಾಪ್ಟಿಸ್ಟ್ ಆಸ್ಪತ್ರೆ ಬಡರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುತ್ತಿದ್ದು, ಸರ್ಕಾರ ಈ ಆಸ್ಪತ್ರೆಗೆ ಎಲ್ಲ ರೀತಿಯ ಸಹಕಾರವನ್ನು ನೀಡಲಿದೆ ಎಂದರು.

Latest Indian news

Popular Stories