ಕಾಂಗ್ರೆಸ್‌ ನ 5 ನೇ ಗ್ಯಾರಂಟಿ ಯುವ ನಿಧಿ ಅನುಷ್ಠಾನದ ಬಗ್ಗೆ ಮಹತ್ವದ ಮಾಹಿತಿ ನೀಡಿದ ಸುರ್ಜೇವಾಲ

ಬೆಂಗಳೂರು,: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆಯನ್ನು ಇದೇ ಡಿಸೆಂಬರ್‌ ತಿಂಗಳ ಕೊನೆಯಲ್ಲಿ ನಿರುದ್ಯೋಗಿ ಪದವೀಧರ ಮತ್ತು ಡಿಪ್ಲೋಮ ಪದವಿ ಪಡೆದವರು ಗೌರವ ಧನ ಪಡೆಯಲು ನೋಂದಣಿ ಪ್ರಕ್ರಿಯೆಯು ಪ್ರಾರಂಭ ಆಗಲಿದೆ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

ನಮ್ಮ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿಯನ್ನು ಸರ್ಕಾರ ವಾಗ್ದಾನದಂತೆ ಜಾರಿಗೊಳಿಸಲಿದೆ.ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿ ವಾಗ್ದಾನಕ್ಕೆ ಮಹಾಜನತೆಯು ವಿಶ್ವಾಸವಿಟ್ಟು ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ತಂದಿದ್ದರಿಂದ ನಮ್ಮ ಸರ್ಕಾರದ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿದೆ.

ಮೊದಲನೇಯದಾಗಿ ಶಕ್ತಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತವಾಗಿ ಪ್ರತಿ ದಿನ ಸುಮಾರು 60 ರಿಂದ 62 ಲಕ್ಷ ಮಹಿಳೆಯರು ಪ್ರಯಾಣಿಸುವ ಅವಕಾಶ ದೊರಕಿದೆ. ಇದುವರೆಗೆ 114. 54ಕೋಟಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ತೆರಳಿದ್ದಾರೆ. ಅದರ ವೆಚ್ಚ 2700 ಕೋಟಿ ರೂ.ಗಳಾಗಿವೆ.ಮಾಸಿಕ 200 ಯೂನಿಟ್‌ವರೆಗೆ ವಿದ್ಯುತ್ ಉಪಯೋಗಿಸಿದ ರಾಜ್ಯದ 1 ಕೋಟಿ 60 ಲಕ್ಷ ಕುಟುಂಬಗಳ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ. ಇದರಿಂದ ತಿಂಗಳಿಗೆ ಸುಮಾರು 800 ಕೋಟಿ ರೂಪಾಯಿಯನ್ನು ಖರ್ಚು ಮಾಡಲಾಗುತ್ತಿದೆ.

ಗೃಹ ಲಕ್ಷ್ಮಿ ಯೋಜನೆಯಲ್ಲಿ ಕುಟುಂಬದ ಯಜಮಾನಿಯ ಖಾತೆಗೆ ಪ್ರತಿ ತಿಂಗಳು 2 ಸಾವಿರ ರೂ. ಜಮಾ ಮಾಡಲಾಗುತ್ತಿದ್ದು, 1 ಕೋಟಿ 16 ಲಕ್ಷ ಮಹಿಳೆಯರ ಖಾತೆಗಳಿಗೆ ಡಿಬಿಟಿ ಮೂಲಕ 2300 ಕೋಟಿ ಹಣ ನೇರವಾಗಿ ಜಮಾ ಆಗುತ್ತಿದೆ .ಪ್ರಸ್ತುತ ವರ್ಷದಲ್ಲಿ ನಮ್ಮ ಎಲ್ಲ 5 ಗ್ಯಾರಂಟಿ ಯೋಜನೆಗಳಿಗೆ ಬೇಕಾದ 38 ಸಾವಿರ ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರ ಕಾಯ್ದಿರಿಸಿದೆ. ಮುಖ್ಯವಾಗಿ ಈ ನಾಲ್ಕೂ ಪ್ರಮುಖ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ 4 ಕೋಟಿ 30 ಲಕ್ಷ ಫಲಾನುಭವಿಗಳು ಪ್ರಯೋಜನವನ್ನು ಪಡೆದುಕೊಂಡಿದ್ದಾರೆ ಎಂದು ಹೇಳಿದರು.

Latest Indian news

Popular Stories