ಬೆಂಗಳೂರು: ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ವಿಜಯಪುರದ ಮ್ಯೂಸಿಯಂಗೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದು ಬಂದಿದೆ.
ಇತ್ತೀಚೆಗಷ್ಟೇ ಬೆಂಗಳೂರಿನ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿತ್ತು, ನಂತರ ಬೆಂಗಳೂರಿನ ವಿಶ್ವೇಶ್ವರಯ್ಯ ಮ್ಯೂಸಿಯಂಗೆ ನಿನ್ನೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.ಈ ಬೆನ್ನಲ್ಲೇ ವಿಜಯಪುರದ ಮ್ಯೂಸಿಯಂಗೂ ಬಾಂಬ್ ಬೆದರಿಕೆ ಸಂದೇಶ ಬಂದಿದೆ ಎಂದು ತಿಳಿದು ಬಂದಿದೆ.
ವಿಜಯಪುರದ ಮ್ಯೂಸಿಯಂಗೆ ಬಾಂಬ್ ಇಟ್ಟಿರುವುದಾಗಿ ಕಿಡಿಗೇಡಿಗಳು ಇಮೇಲ್ ಕಳುಹಿಸಿದ್ದಾರೆ ಎಂದು ತಿಳಿದು ಬಂದಿದೆ. ಈ ಹಿನ್ನೆಲೆ ಆತಂಕ ಸೃಷ್ಟಿಯಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.