ನಾನು ರೈತರ ಪರ, ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ: ಸಿಎಂ ಸಿದ್ಧರಾಮಯ್ಯ

ಜಯನಗರ: ನಾನು ರೈತರ ಪರ: ಬೆಳೆಗಳಿಗೆ ತೊಂದರೆ ಆಗಲು ಬಿಡಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ತುಂಗಭದ್ರಾ ಡ್ಯಾಂ ಬಳಿಯಲ್ಲಿ ಕ್ರಸ್ಟ್ ಗೇಟ್ ಕೊಟ್ಟಿ ಹೋಗಿದ್ದನ್ನು ಪರಿಶೀಲಿಸಿದ ಬಳಿಕ ಹೇಳಿದ್ದಾರೆ.

ಅವರು ಇಂದು ತುಂಗಭದ್ರಾ ಜಲಾಶಯ ಗೇಟ್ ಮುರಿದಿರುವ ಸ್ಥಳವನ್ನು ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ತುಂಗಭದ್ರಾ ಜಲಾಶಯದ ನೀರನ್ನು ಗೇಟ್ ಗಳ ಮೂಲಕ ಬಿಡಲಾಗುತ್ತಿತ್ತು. ನೀರಿನ ಹರಿವನ್ನು ತಡೆಯುವಂತಹ ಗೇಟ್ ಗಳಲ್ಲಿ 19ನೇ ಗೇಟ್ ತುಂಡಾಗಿದೆ. ಜಲಾಶಯ ಗೇಟ್ ಗಳ ನಿರ್ಮಾಣ ತಜ್ಞ ಹಾಗೂ ಸುರಕ್ಷತೆ ತಜ್ಞ ಎಂಜಿನಿಯರ್ ಕನ್ನಯ್ಯ ನಾಯ್ಡು ಅವರ ಜೊತೆ ಚರ್ಚಿಸಿದ್ದೀನಿ.

ಅವರಿಂದ ದುರಸ್ತಿ ಕಾರ್ಯವನ್ನು ಕೈಗೊಳ್ಳಲಾಗಿದೆ. ತುಂಗಭದ್ರಾ ಜಲಾಶಯದ ಸಂಪೂರ್ಣ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಜಲಶಾಯ ಮಂಡಳಿಯದಾಗಿದ್ದು, ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು, ಕೇಂದ್ರ ಜಲ ಆಯೋಗ, ಆಂಧ್ರ, ತೆಲಂಗಾಣ ಮತ್ತು ಕರ್ನಾಟಕದ ಸದಸ್ಯರು ಮಂಡಳಿಯಲ್ಲಿರುತ್ತಾರೆ.

ಈ ಜಲಾಶಯದ ನಿರ್ಮಾಣ ದೇಶಕ್ಕೆ ಸ್ವಾತಂತ್ರ್ಯ ಬಂದ ಮರು ವರ್ಷವೇ ಕೈಗೆತ್ತಿಕೊಂಡು 1948 ರಲ್ಲಿ ಪ್ರಾರಂಭವಾಗಿ 1953 ರಲ್ಲಿ ಪೂರ್ಣಗೊಂಡು, 1954 ರಿಂದ ಜಲಾಶಯದಿಂದ ನಾಲೆಗಳಿಗೆ ನೀರು ಬಿಡಲು ಪ್ರಾರಂಭಿಸಲಾಯಿತು. ಸುಮಾರು 70 ವರ್ಷಗಳಷ್ಟು ಹಳೆಯದಾದ ಡ್ಯಾಂನಲ್ಲಿ ಇಲ್ಲಿನವರೆಗೆ ಯಾವುದೇ ಗೇಟ್ ನ ಚೈನ್ ತುಂಡಾಗಿರಲಿಲ್ಲ ಎಂದು ವಿವರಿಸಿದರು.

Latest Indian news

Popular Stories