ಬಸವಣ್ಣನ ತತ್ವದಂತೆ ಕಾಂಗ್ರೆಸ್‌ ಪಂಚ ಗ್ಯಾರಂಟಿ ಜಾರಿ: ಡಿ.ಕೆ.ಶಿವಕುಮಾರ್‌

ಬೆಂಗಳೂರು(ಮೇ.11): ನಮ್ಮದು ಬಸವ ತತ್ವದ ಮೇಲೆ ನಡೆಯುತ್ತಿರುವ ಸರ್ಕಾರ. ಸರ್ವರಿಗೂ ಸಮ ಬಾಳು, ಸರ್ವರಿಗೂ ಸಮ ಪಾಲು, ಸಮ ಸಮಾಜ ನಿರ್ಮಾಣದಂತಹ ತತ್ವಗಳ ಮೇಲೆಯೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರಿನ ಬಸವ ಸಮಿತಿಯು ನಗರದ ಬಸವ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿಯ ಸಮಾರಂಭ ಹಾಗೂ ಡಾ। ಪ್ರಭಾಕರ ಕೋರೆಯವರಿಗೆ ‘ಕಾಯಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಬಸವಣ್ಣನವರ ಹಾದಿಯಲ್ಲೇ ನಡೆದುಕೊಂಡು ಬರುತ್ತಿದೆ. ನಮ್ಮ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮಗಳಿಗೂ ಬಸವ ತತ್ವೇ ಸ್ಫೂರ್ತಿ. ಸರ್ವರಿಗೂ ಸಮಬಾಳು, ಸಮಪಾಲು ತತ್ವದಲ್ಲಿ ನಡೆಯುತ್ತಿದ್ದೇವೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಇದೇ ಆಧಾರದಲ್ಲಿ ಜಾರಿಗೆ ತಂದಿದ್ದೇವೆ. ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕಾರ ವನ್ನು ಬಸವ ಜಯಂತಿಯದ್ದೇ ತೆಗೆದುಕೊಳ್ಳಬೇಕು ಎಂದು ಆ ದಿನವನ್ನು ಆಯ್ಕೆ ಮಾಡಿದ್ದರು ಎಂದು ಹೇಳಿದರು.

Latest Indian news

Popular Stories