ಇಂದು ಬೆಂಗಳೂರಿನ ಏರ್ಪೋರ್ಟ್ ನಲ್ಲಿ ನೂತನ ‘ಇಂದಿರಾ ಕ್ಯಾಂಟೀನ್’ ಉದ್ಘಾಟನೆ : ಸಿಎಂ ಡಿಸಿಎಂ ಭಾಗಿ

ಬೆಂಗಳೂರು: ಬೆಂಗಳೂರಿನ ಗ್ರಾಮಾಂತರ ಜಿಲ್ಲೆಯಲ್ಲಿರುವ ದೇವರಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಾಣಗೊಂಡ ಇಂದಿರಾ ಕ್ಯಾಂಟೀನನ್ನು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಉದ್ಘಾಟಿಸಲಿದ್ದಾರೆ.

ಹೌದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ಗು ಕೂಡ ಇದೀಗ ಇಂದಿರಾ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ಇಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಇಂದಿರಾ ಕ್ಯಾಂಟೀನ್ ಅನ್ನು ಉದ್ಘಾಟನೆ ಮಾಡಲಿದ್ದಾರೆ.

ಅಲ್ಲದೆ ಇದರ ಜೊತೆಗೆ ವಿವಿಧ ರೀತಿಯ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲಾಗುತ್ತಿದೆ. ಏರ್ಪೋರ್ಟ್ ನ P7 ಪಾರ್ಕಿಂಗ್ ಪ್ರದೇಶದಲ್ಲಿ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ. ವಿಮಾನ ನಿಲ್ದಾಣಕ್ಕೆ ಬರುವ ಕ್ಯಾಬ್ ಚಾಲಕರ ಒಂದು ಬೇಡಿಕೆಯ ಮೇರೆಗೆ ಅವರಿಗೆ ಅನುಕೂಲವಾಗಲೆಂದು ಇದೀಗ ಅಲ್ಲಿ ಇದ್ರ ಕ್ಯಾಂಟೀನ್ ನಿರ್ಮಾಣ ಮಾಡಲಾಗಿದೆ ಎಂದು ತಿಳಿದುಬಂದಿದೆ.

Latest Indian news

Popular Stories