ಬೆಂಗಳೂರು ಫೆಬ್ರವರಿ 06: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅತ್ಯಂತ ಕೆಟ್ಟ ದುರಾಡಳಿ ನಡೆಯುತ್ತಿದ್ದು,ಎಲ್ಲ ರಂಗದಲ್ಲೂ ವೈಫಲ್ಯ ವಾಗಿದೆ. ಜನ ಸಾಮನ್ಯರು,ರೈತರು, ಮಹಿಳೆಯರು ಸಂಕಷ್ಟದಲ್ಲಿದ್ದು,ದಿನನಿತ್ಯ ಹಿಂಸೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ನೋಡಿದಾಗ ಅದರ ವಿರುದ್ದ ಸಮರ ಸಾರಬೇಕಾಗಿರುವ ಭಾರತೀಯ ಜನತಾ ಪಕ್ಷ ಆಂತರಿಕವಾಗಿ ಭಿನ್ನಾಭಿಪ್ರಾಯದ ಮಾತಿನ ಸಮರ ಅತ್ಯಂತ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ.
ಇಡೀ ದೇಶಕ್ಕೆ ಸಮರ್ಥ ಆಡಳಿತ ಕೊಡುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಈ ಪಕ್ಷ ಮತ್ತು ವರಿಷ್ಠರ ತೀರ್ಮಾನವೇ ಅಂತಿಮವಾಗಿದ್ದು ನಾನು ಯಾವುದೇ ಗುಂಪುಗಾರಿಕೆಯಲ್ಲಿ ನಂಬಿಕೆ ಇಟ್ಟವನಲ್ಲ. ಆದುದರಿಂದ ನಾನು ಯಾವುದೇ ಒಂದು ಗುಂಪಿನ ಸಭೆಯನ್ನು ಕರೆಯುವ ಪ್ರಶ್ನೆಯೇ ಬರುವುದಿಲ್ಲ. ಎಲ್ಲರನ್ನೂ ಒಂದುಗೂಡಿಸುವ ಪ್ರಾಮಾಣಿಕ ಪ್ರಯತ್ನ ಮಾಡುವ ಹಲವಾರು ಮುಖಂಡರಲ್ಲಿ ನಾನೂ ಒಬ್ಬ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಎರಡೂ ಕಡೆ ತಾಳ್ಮೆ ಯನ್ನು ಕಳೆದುಕೊಳ್ಳದೆ ಕರ್ನಾಟಕ ಬಿಜೆಪಿಯ ಸರ್ವೋಚ್ಚ ನಾಯಕ ಮಾಜಿ ಮುಖ್ಯಮಂತ್ರಿ ಬಿ. ಎಸ್ ಯಡಿಯೂರಪ್ಪ ಹಾಗೂ ಇತರ ಹಿರಿಯ ಮುಖಂಡರ ಮಾರ್ಗದರ್ಶನದಲ್ಲಿ ಒಟ್ಟಿಗೆ ಕುಳಿತು ಮಾತುಕತೆಯ ಮೂಲಕ ಇದನ್ನು ಬಗೆ ಹರಿಸಬೇಕು. ಇಲ್ಲದಿದ್ದರೆ ವರಿಷ್ಠರ ತೀರ್ಮಾನಕ್ಕೆ ನಾವೆಲ್ಲರೂ ಬದ್ದರಾಗಬೇಕು. ವರಿಷ್ಠರು ಕೂಡಲೇ ಕರ್ನಾಟಕದ ಪಕ್ಷದ ಬೆಳವಣಿಗೆಯ ಬಗ್ಗೆ ಗಮನವನ್ನು ಹರಿಸಿ, ಎಲ್ಲ ಪ್ರಮುಖರ ಜೊತೆಗೆ ಚರ್ಚೆ ಮಾಡಿ ಸೂಕ್ತ ನಿರ್ಣಯವನ್ನು ತೆಗೆದುಕೊಳ್ಳುತ್ತಾರೆ ಎನ್ನುವ ನಂಬಿಕೆ ನನಗಿದೆ ಎಂದು ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

ಈ ವೇಳೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ ಪಕ್ಷದ ರಾಜ್ಯ ಸರಕಾರದ ವಿಚಾರದಲ್ಲಿ ಮಾಜಿ ಪ್ರಧಾನಮಂತ್ರಿಗಳಾದ ಮಾನ್ಯ ಎಚ್.ಡಿ.ದೇವೇಗೌಡರು ಪ್ರಸ್ತಾಪ ಮಾಡಿದ್ದು ಸರಿ ಇದೆ. ಕರ್ನಾಟಕದಲ್ಲಿ ದಲಿತರ ದುರ್ಬಳಕೆ, ಅಧಿಕಾರಿಗಳ ಆತ್ಮಹತ್ಯೆ, ಭ್ರಷ್ಟಾಚಾರ ಮಿತಿ ಮೀರಿರುವುದು, 136 ಶಾಸಕರಿದ್ದರೂ ಅಭದ್ರತೆಯ ವಾತಾವರಣ ಸಂಬಂಧಿತ ದೇವೇಗೌಡರ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆಯವರು ಆಕ್ಷೇಪ ಎತ್ತಲು ಯಾವುದೇ ಕಾರಣ ಇಲ್ಲ; ದಲಿತರಿಗೆ ಅನ್ಯಾಯ ಮಾಡಿದ ಕಾಂಗ್ರೆಸ್ಸಿನ ವಿರುದ್ಧವಾಗಿ ಮಾನ್ಯ ಖರ್ಗೆಜೀ ಅವರೇ ಮಾತನಾಡಬೇಕಿತ್ತು ಎಂದು ಅಭಿಪ್ರಾಯಪಟ್ಟರು.
ದಲಿತರ ಪರವಾಗಿ ಮಾತನಾಡಲು ಅವರಿಗೆ ಬಾಯಿಯೇ ಬರುತ್ತಿಲ್ಲ, ಆದರೆ, ದೇವೇಗೌಡರು ದಲಿತ ಸಮುದಾಯಗಳ ಬಗ್ಗೆ ಆಗಿರುವ ಅನ್ಯಾಯ ಸರಿಪಡಿಸಲು ರಾಜ್ಯಸಭೆಯಲ್ಲಿ ಸಮಯೋಚಿತವಾಗಿ ಮಾತನಾಡಿದ್ದಾರೆ ಎಂದು ತಿಳಿಸಿದರು. ಇದೊಂದು ಭಂಡತನದ ಸರಕಾರ. ಮಾನ್ಯ ಮುಖ್ಯಮಂತ್ರಿಗಳು ಯಾವುದಕ್ಕೂ ಸಮರ್ಪಕ ಉತ್ತರ ಕೊಡುವುದಿಲ್ಲ ಎಂದು ಟೀಕಿಸಿದರು. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ನುಂಗಲಾಯಿತು. ಪರಿಶಿಷ್ಟ ಜಾತಿ- ಪರಿಶಿಷ್ಟ ವರ್ಗಗಳಿಗೆ ಇಟ್ಟಿದ್ದ ಹಣ 25 ಸಾವಿರ ಕೋಟಿಯನ್ನು ಇದೇ ಕಾಂಗ್ರೆಸ್ ಸರಕಾರ ನುಂಗಿದೆ. ಖರ್ಗೆಯವರು ಇದರ ಬಗ್ಗೆ ಯಾಕೆ ಮಾತನಾಡಿಲ್ಲ ಎಂದು ಪ್ರಶ್ನಿಸಿದರು. ಇವತ್ತಿನ ವರೆಗೆ ಚಕಾರ ಎತ್ತಿಲ್ಲ. ನೀವು ಯಾರ ಪರ ಇದ್ದೀರಿ ಎಂದು ಕೇಳಿದರು.