ಬೆಂಗಳೂರಿನ ಪ್ರತಿಷ್ಠಿತ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ದಾಳಿ

ಬೆಂಗಳೂರು, ಮಾರ್ಚ್ 19: ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ. ನಗರದ ವಿವಿಧ ಭಾಗದಲ್ಲಿರುವ ಮೇಘನಾ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.ಮೇಘನಾ ಫುಡ್ಸ್ ಕಂಪನಿ ಹೆಸರಿನಲ್ಲಿ ಬೆಂಗಳೂರು ನಗರದ ವಿವಿಧ ಕಡೆಗಳಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ ಹೊಂದಿದೆ.

ಗ್ರಾಹಕರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಈ ಹೋಟೆಲ್ ಮತ್ತು ರೆಸ್ಟೋರೆಂಟ್‌ಗೆ ಭೇಟಿ ನೀಡುತ್ತಾರೆ. ಸದ್ಯ ಆದಾಯ ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡು ಬಂದ ಹಿನ್ನೆಲೆಯಲ್ಲಿ ಮೇಘನಾ ಫುಡ್ಸ್ ಗ್ರೂಪ್ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು (ಮಾರ್ಚ್ 19) ಮಂಗಳವಾರ ಬೆಳ್ಳಗ್ಗೆ ಐದು ಘಂಟೆಗೆ ಮೇಘನಾ ಫುಡ್ಸ್ ಗ್ರೂಪ್‌ನ ವಿವಿಧ ಹೋಟೆಲ್‌ಗಳ ಮೇಲೆ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದು, ಆದಾಯ ತೆರಿಗೆ ಪಾವತಿ ಸಂಬಂಧ ದಾಖಲೆಗಳ ಪರಿಶೀಲನೆ ಮುಂದುವರಿಸಿದ್ದಾರೆ.

ಕರ್ನಾಟಕ ಮತ್ತು ಗೋವಾ ವಿಭಾಗದ ಐಟಿ ಅಧಿಕಾರಿಗಳು ದಾಳಿಯಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗಿದೆ.ಬೆಂಗಳೂರು ನಗರದ ಕೋರಮಂಗಲದಲ್ಲಿರುವ ಮೇಘನಾ ಫುಡ್ಸ್ ಗ್ರೂಪ್ ಕಚೇರಿ, ಇಂದಿರಾನಗರ, ಜಯನಗರ ಸೇರಿ ಸುಮಾರು ಹತ್ತಕ್ಕೂ ಹೆಚ್ಚು ಕಡೆಗಳಲ್ಲಿ ಏಕಕಾಲಕ್ಕೆ ಐಡಿ ಅಧಿಕಾರಿಗಳು ದಾಳಿ ನಡೆಸಿ, ಪರಿಶೀಲನೆ ಮುಂದುವರಿಸಿದ್ದಾರೆ ಎಂದು ವರದಿಯಾಗಿದೆ.

Latest Indian news

Popular Stories