
ವರಿಷ್ಠರ ಸೂಚನೆಯಂತೆ ತೀರ್ಮಾನ: ಬೊಮ್ಮಾಯಿ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸಲಹೆ, ಸೂಚನೆ ಪ್ರಕಾರ ಮುಂದಿನ ನಿರ್ಣಯ ಕೈಗೊಳ್ಳುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವರಿಷ್ಠರನ್ನು ಭೇಟಿಯಾಗಲು ದೆಹಲಿಗೆ ಆಗಮಿಸಿರುವ ಮುಖ್ಯಮಂತ್ರಿಯವರು, ಕರ್ನಾಟಕ ಭವನದ ಬಳಿ ಪತ್ರಕರ್ತರೊಂದಿಗೆ ಮಾತನಾಡಿದರು.
ಪ್ರಧಾನಿಯವರನ್ನು, ಋಹ ಸಚಿವರನ್ನು ಹಾಗೂ ಪಕ್ಷದ ಅದ್ಯಕ್ಷರನ್ನು ಭೇಟಿಯಾಗುತ್ತೇನೆ. ಮಧ್ಯಾಹ್ನ 1 ಗಂಟೆಗೆ ರಾಜ್ಯದ ಸಂಸದರನ್ನು ಸಭೆ ಮತ್ತು ಭೋಜನಕ್ಕೆ ಆಹ್ವಾನಿಸಿದ್ದೇನೆ, ಇವತ್ತು ಇಲ್ಲಿಯೇ ಉಳಿದುಕೊಂಡು ನಾಳೆ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿ ಮಾಡುತ್ತೇನೆ ಎಂದು ಸಿಎಂ ತಿಳಿಸಿದರು.
ರಾಜ್ಯ ಸಚಿವ ಸಂಪುಟ ರಚನೆ ಸುಗಮವಾಗಿ ನಡೆಯುತ್ತದೆ, ಯಾವುದೇ ಅಡ್ಡಿ-ಆತಂಕಗಳು ಬರದೆ ಉತ್ತಮವಾಗಿ ಪ್ರಕ್ರಿಯೆ ಸಾಗುತ್ತದೆ. ನಮ್ಮದು ರಾಷ್ಟ್ರೀಯ ಪಕ್ಷ, ಇಲ್ಲಿ ಹಲವು ಆಕಾಂಕ್ಷಿಗಳು ಇರುತ್ತಾರೆ, ಪ್ರಾದೇಶಿಕ, ಸಮುದಾಯ ಪ್ರಾತಿನಿಧ್ಯ ನೋಡಿಕೊಂಡು ಸಚಿವ ಸಂಪುಟ ರಚನೆ ಮಾಡಬೇಕಾಗುತ್ತದೆ ಎಂದರು.




