ಕರ್ನಾಟಕ ಫಿಲ್ಮ್ ಚೇಂಬರ್’ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ಭಾಮಾ ಹರೀಶ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹೃದಯ ಸಂಬಂಧಿ ತೊಂದರೆಯಿಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಅವರ ಕುಟುಂಬದ ಮೂಲಗಳು ಮಾಹಿತಿ ನೀಡಿದೆ.

ಅವರಿಗೆ ನಿನ್ನೆ (ಮಾ.27) ಸಡನ್ ಆಗಿ ಆಗಿ ಹೃದಯ ಬಡಿತದಲ್ಲಿ ಏರುಪೇರು ಆಗಿತ್ತು. ಈ ಹಿನ್ನೆಲೆ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ವೈದ್ಯರು ಅಂಜಿಯೋಗ್ರಾಮ್ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಭಾಮಾ ಹರೀಶ್ ಅವರು ಕನ್ನಡದಲ್ಲಿ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿದ್ದಾರೆ. ಮಾಗಡಿ, ಮೆಜೆಸ್ಟಿಕ್ ಸೇರಿದಂತೆ ಹಲವು ಸಿನಿಮಾ ನಿರ್ಮಿಸಿದ್ದಾರೆ.

Latest Indian news

Popular Stories